ತಳಮಟ್ಟದಿಂದ ಜೆಡಿಎಸ್ ಪಕ್ಷ ಸಂಘಟಿಸಿ-ನಿಖಿಲ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಲ್ಲಾಪುರದ ಶ್ರೀ ಗುಡ್ಡದ ಮಲ್ಲೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ-ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಪಕ್ಷದ ಮುಖಂಡರು ಹಾಗೂ ಹಿರಿಯ ಕಾರ್ಯಕರ್ತರೊಂದಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಿ, ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದರು.

ಜೆಡಿಎಸ್ ಪಕ್ಷವನ್ನು ಶಿವಮೊಗ್ಗ ಗ್ರಾಮಾಂತರ ಮತ ಕ್ಷೇತ್ರದಲ್ಲಿ ಬಲಿಷ್ಠವಾಗಿ ಕಟ್ಟವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ 9964002028 ಸಂಖ್ಯೆಗೆ ಮಿಸ್ಡ್ ಕಾಲ್ ಕೊಡಿಸುವ ಮೂಲಕ ಸದಸ್ಯತ್ವ ನೋಂದಣಿಯನ್ನು ಯಶಸ್ವಿಗೊಳಿಸಲು ಅವರು ಮನವಿ ಮಾಡಿದರು.

- Advertisement - 

ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಹಂತ ಹಂತವಾಗಿ ಎಡುವುತ್ತಿದ್ದು, ರಾಜ್ಯದ ಜನತೆ ಗ್ಯಾರಂಟಿ ಸರ್ಕಾರದ ಆಡಳಿತ ವೈಖರಿಗೆ ಬೇಸತ್ತು ಹೋಗಿದ್ದಾರೆ ಎಂದು ಕಾರ್ಯಕರ್ತರಿಗೆ ತಿಳಿಸಿ, ಭದ್ರಾವತಿಯ ವಿಎಸ್ ಐಎಲ್ ಕಾರ್ಖಾನೆಗೆ ಕುಮಾರಣ್ಣನವರು ಮರುಜೀವ ನೀಡಲು ಶ್ರಮಿಸುತ್ತಿರುವ ಬಗ್ಗೆ ನಿಖಿಲ್ ಮಾಹಿತಿ ನೀಡಿದರು.

ಮುಂಬರುವ ದಿನಗಳಲ್ಲಿ ಜೆಡಿಎಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ 2028 ರ ಚುನಾವಣೆಗೆ ಮುನ್ನುಡಿ ಬರೆಯಲು ನಾವೆಲ್ಲರೂ ಕಂಕಣಬದ್ಧರಾಗಿ ದುಡಿಯೋಣ ಎಂದು ನಿಖಿಲ್ ಕುಮಾರ್ ಸ್ವಾಮಿ ಕಾರ್ಯಕರ್ತ ಬಂಧುಗಳಿಗೆ ತಿಳಿಸಿದರು.

- Advertisement - 

ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಪೂರ್ಯನಾಯ್ಕ, ದೇವದುರ್ಗದ ಶಾಸಕಿ ಕರೆಮ್ಮ ನಾಯಕ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ, ಮಾಜಿ ಶಾಸಕ ಸುರೇಶ್ ಗೌಡ, ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ,

ಜಿಲ್ಲಾಧ್ಯಕ್ಷ ಕಡಿದಾಳ ಗೋಪಾಲ್, ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ತಾಲ್ಲೂಕು ಅಧ್ಯಕ್ಷ ಸತೀಶ್ ಗೌಡ, ಮುಖಂಡರಾದ ಮಲ್ಲೇಶಪ್ಪ, ದೀಪಕ್ ಪೂರ್ಯನಾಯ್ಕ,  ಕಾಂತರಾಜು, ಬಸಪ್ಪ ಗೌಡ, ಪರಶುರಾಮ, ಸತೀಶ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

 

 

 

Share This Article
error: Content is protected !!
";