ಚಂದ್ರವಳ್ಳಿ ನ್ಯೂಸ್, ಭದ್ರಾವತಿ:
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ-ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಪಕ್ಷದ ಮುಖಂಡರು ಹಾಗೂ ಹಿರಿಯ ಕಾರ್ಯಕರ್ತರೊಂದಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಉದ್ಘಾಟಿಸಿ, ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಜೆಡಿಎಸ್ ಪಕ್ಷವನ್ನು ಭದ್ರಾವತಿ ಮತಕ್ಷೇತ್ರದಲ್ಲಿ ಬಲಿಷ್ಠವಾಗಿ ಕಟ್ಟವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ 9964002028 ಸಂಖ್ಯೆಗೆ ಮಿಸ್ಡ್ ಕಾಲ್ ಕೊಡಿಸುವ ಮೂಲಕ ಸದಸ್ಯತ್ವ ನೋಂದಣಿಯನ್ನು ಯಶಸ್ವಿಗೊಳಿಸಲು ಅವರು ಮನವಿ ಮಾಡಿದರು.
ಸಂಪದ್ಭರಿತ ನಾಡನ್ನು ಅದೋಗತಿಗೆ ತೆಗೆದುಕೊಂಡು ಹೋಗುತ್ತಿರುವ ಗ್ಯಾರಂಟಿ ಸರ್ಕಾರದ ಆಡಳಿತ ವೈಫಲ್ಯ, ಅಧಿಕಾರಿಗಳಿಗೆ ಪಾರದರ್ಶಕವಾಗಿ ಕೆಲಸ ಮಾಡಲು ಅವಕಾಶ ನೀಡದ ಕ್ರಮ, ದ್ವೇಷ ರಾಜಕಾರಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಕಾರ್ಯಕರ್ತರಿಗೆ ತಿಳಿಸಿದರು.
ಭದ್ರಾವತಿಯ ವಿಎಸ್ ಎಲ್ ಕಾರ್ಖಾನೆಗೆ ಮರುಜೀವ ನೀಡಲು ಕುಮಾರಸ್ವಾಮಿವರು ತೆಗೆದುಕೊಂಡಿರುವ ಕ್ರಮಗಳ ಕುರಿತು ಮಾಹಿತಿ ನಿಖಿಲ್ ನೀಡಿದರು.
ಮುಂಬರುವ ದಿನಗಳಲ್ಲಿ ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವ ಮೂಲಕ 2028ಕ್ಕೆ ಮತ್ತೊಮ್ಮೆ ಕುಮಾರಣ್ಣನವರನ್ನು ಮುಖ್ಯಮಂತ್ರಿಗಳಾಗಿ ಆಯ್ಕೆ ಮಾಡಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು ನಿಖಿಲ್ ಕುಮಾರಸ್ವಾಮಿ ಕರೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕಿ ಶಾರದಾ ಪೂರ್ಯನಾಯ್ಕ, ವಿಧಾನಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ, ಮಾಜಿ ಶಾಸಕ ಸುರೇಶ್ ಗೌಡ, ಮಹಿಳಾ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ, ಕ್ಷೇತ್ರದ ಪ್ರಮುಖ ಮುಖಂಡರಾದ ಶಾರದಾ ಅಪ್ಪಾಜಿಗೌಡ, ಅಜೀತ್ ಅಪ್ಪಾಜಿಗೌಡ, ಜಿಲ್ಲಾಧ್ಯಕ್ಷ ಕಡಿದಾಳ ಗೋಪಾಲ್ ಗೌಡ,
ತಾಲ್ಲೂಕು ಅಧ್ಯಕ್ಷ ಕರುಣಾಮೂರ್ತಿ, ಪ್ರಧಾನಕಾರ್ಯದರ್ಶಿ ಕನ್ಯಾಕುಮಾರಿ, ವಕ್ತಾರೆ ಪೂರ್ಣಿಮಾ, ಮುಖಂಡರಾದ ಅಂಚಲ್ ಅಜೀತ್ ಕುಮಾರ್, ಮಧುಕುಮಾರ್, ವೆಂಕಟೇಶ್, ಗೀತಾ ಸತೀಶ್, ವಿಶಾಲಾಕ್ಷಿ, ಸಾವಿತ್ರಿ, ವೆಂಕಟೇಶ್, ರಾಮಕೃಷ್ಣ, ಚಂದ್ರಣ್ಣ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

