ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾಗೌಡ ಸೇರಿ ಒಟ್ಟು ಏಳು ಜನರ ಆರೋಪಿಗಳ ಬೇಲ್ ರದ್ದು ವಿಚಾರಕ್ಕೆ ಸಂಬಂಧಿಸಿದ ವಾದ- ಪ್ರತಿವಾದ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.
ಸುಪ್ರೀಂಕೋರ್ಟ್ ಪೀಠಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಇಂಚಿಂಚೂ ಮಾಹಿತಿಯನ್ನು ವಕೀಲರು ಸಲ್ಲಿಸಿದರಲ್ಲದೆ ಸಾಂಧರ್ಭಿಕ ಸಾಕ್ಷಿ, ಪ್ರತ್ಯಕ್ಷ ಸಾಕ್ಷಿಗಳ ವಿವರ ಕೂಡ ಸಲ್ಲಿಸಲಾಯಿತು.
ಸರ್ಕಾರದ ಪರ ಸಿದ್ದರ್ಥ್ ಲೂತ್ರಾ ವಾದ ಮಂಡಿಸಿದರು. ದರ್ಶನ್ ಪರ ವಕೀಲರಾದ ಸಿದ್ದಾರ್ಥ್ ದವೆ ವಾದ ಮಂಡಿಸಿದರು.
ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ಆದೇಶ ಕಾಯ್ದಿರಿಸಿತು. ಅಲ್ಲದೆ ಒಂದು ವಾರದೊಳಗೆ ಲಿಖಿತ ರೂಪದಲ್ಲಿ ವಾದಾಂಶ ಸಲ್ಲಿಸಬೇಕು ಎಂದು ನ್ಯಾಯಮೂರ್ತಿ ಪರ್ದಿವಾಲಾ ಆದೇಶಿಸಿದರು.

