ವಸೂಲಿವಾಲಾ ರಾಜ್ಯ ಉಸ್ತುವಾರಿಯೋ? ಕರ್ನಾಟಕದ ಮುಖ್ಯಮಂತ್ರಿಯೋ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಸೂಲಿವಾಲಾ(ಸುರ್ಜೇವಾಲಾ) ಕೇವಲ ರಾಜ್ಯ ಉಸ್ತುವಾರಿಯೋ ? ಕರ್ನಾಟಕದ ಮುಖ್ಯಮಂತ್ರಿಯೋ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

ಇಷ್ಟು ದಿನ ಕಾಂಗ್ರೆಸ್ ಶಾಸಕರು ಹಾಗೂ ಸಚಿವರೊಂದಿಗೆ ಸಭೆ ನಡೆಸುತ್ತಿದ್ದ ರಣದೀಪ್ ಸುರ್ಜೇವಾಲಾ ಈಗ ಸೂಪರ್ ಸಿಎಂ ರೀತಿ ಸರ್ಕಾರದ ಕಾರ್ಯದರ್ಶಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಜೆಡಿಎಸ್ ಕಿಡಿಕಾರಿದೆ.

- Advertisement - 

ಸುರ್ಜೇವಾಲಾಗೆ ಆ ಅಧಿಕಾರ ಕೊಟ್ಟವರು ಯಾರುಸರ್ಕಾರಿ ಅಧಿಕಾರಿಗಳ ಜೊತೆ ಸಭೆ ನಡೆಸುವುದು ಸಂವಿಧಾನ ವಿರೋಧಿ ಕೃತ್ಯ!

ರಾಜ್ಯ ಆಡಳಿತರೂಢ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ, ಡಿಕೆಶಿ ಬಣಗಳ ನಡುವೆ ಅಧಿಕಾರಕ್ಕಾಗಿ ಅಂತರ್ಯುದ್ಧ ನಡೆಯುತ್ತಿದೆ.  ಹೀಗಾಗಿ ಹೈಕಮಾಂಡ್ ಸದ್ದಿಲ್ಲದೆ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾರನ್ನೇ ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ಮಾಡಿರುವ ಶಂಕೆಯೂ ವ್ಯಕ್ತವಾಗುತ್ತಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

- Advertisement - 

ಹೈಕಮಾಂಡ್ ಗುಲಾಮಗಿರಿಯಲ್ಲಿ ತೊಡಗಿರುವ ಡಮ್ಮಿ ಸಿಎಂ‌  ಸಿದ್ದರಾಮಯ್ಯ ಹಾಗೂ ಡಮ್ಮಿ ಡಿಸಿಎಂ  ಡಿ.ಕೆ ಶಿವಕುಮಾರ್ ಇವರುಗಳು ಕರ್ನಾಟಕದ ಸ್ವಾಭಿಮಾನವನ್ನು ಅಡವಿಟ್ಟಿದ್ದಾರೆ. ಜೊತೆಗೆ ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟಿರುವ ಜನಾದೇಶಕ್ಕೆ ಅಪಮಾನ, ವಿದ್ರೋಹ ಎಸಗುತ್ತಿದ್ದಾರೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

 

Share This Article
error: Content is protected !!
";