ಚಂದ್ರವಳ್ಳಿ ನ್ಯೂಸ್, ತುಮಕೂರು :
ತುಮಕೂರಿನಲ್ಲಿ ಕುಂಚಶ್ರೀ ಮಹಿಳಾ ಬಳಗದಿಂದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು.
ಎಲೆ ರಾಂಪುರ ಕುಂಚಿಟಿಗ ಪೀಠಾಧ್ಯಕ್ಷರಾದ ಡಾ.ಹನುಮಂತನಾಥ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬಿಬಿಎಂಪಿ ಡೆಪ್ಯೂಟಿ ಕಮಿಷನರ್ ಹಾಗೂ ಕೆಂಪೇಗೌಡ ದಂತ ವೈದ್ಯಕೀಯ ಕಾಲೇಜಿನ ಅಧ್ಯಕ್ಷರಾದ ಬೇತೂರ್ ಪಾಳ್ಯ ಜೆ. ರಾಜು ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಕುಂಚಶ್ರೀ ಬಳಗದಿಂದ ಆತ್ಮೀಯವಾಗಿ ಸತ್ಕರಿಸಲಾಯಿತು.
ಕುಂಚಶ್ರೀ ಮಹಿಳಾ ಬಳಗ ಮುಖ್ಯಸ್ಥೆ ಲಲಿತಾ ಮಲ್ಲಪ್ಪ ಅಧ್ಯಕ್ಷತೆ ವಹಿಸಿದ್ದರು. ತುಮಕೂರು ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಪೋಷಕರು ಆಗಮಿಸಿದ್ದರು.

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕಗಳಿಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

