ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅದ್ಯಾವ ಘಳಿಗೆಯಲ್ಲಿ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆಯ ಸಚಿವರಾದ್ರೋ ಇಡೀ ಇಲಾಖೆಯೇ ಅನಾರೋಗ್ಯ ಪೀಡಿತವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಶಾಲಾ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ಇಲ್ಲ, ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳು ಸ್ಟಾಕ್ ಇಲ್ಲ, ಹೊರಗೆ ಕೊಳ್ಳೋಣ ಅಂದರೆ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳಿಲ್ಲ, ಆಂಬುಲೆನ್ಸ್ ಡ್ರೈವರ್ ಗಳಿಗೆ ಸಂಬಳ ಇಲ್ಲ ಎಂದು ಅವರು ದೂರಿದ್ದಾರೆ.
ಆಸ್ಪತ್ರೆ ಸೇರಿದ ಗರ್ಭಿಣಿ, ಬಾಣಂತಿ, ನವಜಾತ ಶಿಶುಗಳು ಜೀವಂತವಾಗಿ ಮನೆಗೆ ಮರಳುವ ಗ್ಯಾರಂಟಿ ಇಲ್ಲ. ನಮ್ಮ ಕ್ಲಿನಿಕ್ ಗಳಲ್ಲಿ ವೈದ್ಯರಿಲ್ಲ.
ಆರೋಗ್ಯ ಇಲಾಖೆಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಇನ್ನೂ ಅದ್ಯಾವ ದುಸ್ಥಿತಿಗೆ ತೆಗೆದುಕೊಂಡು ಹೋಗಲಿದೆಯೋ? ಎಂದು ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.

