ಹಿರಿಯೂರು ಟಿಹೆಚ್ಒ ಡಾ.ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲೆಯ ಟಿಹೆಚ್ಒ ಡಾ.ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು
, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಆದಾಯಕ್ಕೂ ಮೀರಿದ ಆಸ್ತಿ, ಹಣ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಟಿಹೆಚ್ಒ ಡಾ.ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ಎಸ್.ಪಿ ವಾಸುದೇವರಾಮ್, ಡಿವೈಎಸ್ ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

- Advertisement - 

ಹಿರಿಯೂರು ಪಟ್ಟಣದ ಯರಗುಂಟೇಶ್ವರ ಬಡಾವಣೆಯ ಮನೆ, ಕ್ಲಿನಿಕ್ ಸೇರಿದಂತೆ ಹಲವಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

- Advertisement - 

ಆದಿವಾಲ ಗ್ರಾಮದಲ್ಲಿ ಎಸ್ಎಲ್ ವಿ ಕ್ಲಿನಿಕ್ ಕೂಡಾ ಟಿಹೆಚ್ಒ ವೆಂಕಟೇಶ್ ತೆರೆದಿದ್ದು ಕ್ಲಿನಿಕ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಸೀಲನೆ ಮಾಡಿದ್ದಾರೆ.

 

 

Share This Article
error: Content is protected !!
";