ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಅವರು ಬುಧವಾರ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರ ಜೊತೆ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಸ್ಥಿತಿಗತಿ ಕುರಿತು ಗಂಭೀರ ಚರ್ಚೆ ನಡೆಸಿದರು.
ಜಿಲ್ಲೆಯಾದ್ಯಂತ ಯಾವ ಮಟ್ಟದಲ್ಲಿ ಅನುದಾನ ಬಳಕೆ ಆಗಿದೆ ಹಾಗೂ ಮುಂದಿನ ದಿನಗಳಲ್ಲಿ ಅಗತ್ಯ ಕಾರ್ಯಕ್ರಮಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಕ್ಕೆ ತರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುದೀರ್ಘ ಚರ್ಚೆ ನಡೆಸಿದರು.

