ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ಜೊತೆ ಜಿಲ್ಲಾ ವ್ಯಾಪ್ತಿಯ ಅಭಿವೃದ್ಧಿ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.
ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಯೋಜನೆಗಳಿಗೂ ಬಜೆಟ್‌ನಲ್ಲಿ ಅಗತ್ಯ ಪ್ರಮಾಣದ ಅನುದಾನ ಮೀಸಲಿಟ್ಟಿದ್ದು, ಈ ಅನುದಾನ ಬಳಕೆ ಮಾಡಿಕೊಂಡು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ, ಜಾರಿಗೊಳಿಸುವಂತೆ ಸಲಹೆ ನೀಡಿದರು.
ಇದಾದ ನಂತರ ದಾವಣಗೆರೆ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಶಾಸಕರ ಜೊತೆ ಸಭೆ ನಡೆಸಿ, ಜಿಲ್ಲೆಗೆ ಅಗತ್ಯವಿರುವ ಅನುದಾನ ಹಾಗೂ ಯೋಜನೆಗಳ ಮಾಹಿತಿ ಪಡೆದು,
ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ಸರ್ಕಾರದ ಯೋಜನೆಗಳು ಹಾಗೂ ಸಾಧನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮನೆ ಮನಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಲಹೆ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಅವಳಿ ಜಿಲ್ಲೆಗಳಿಗೆ ಸಂಬಂಧಿಸಿದ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಮುಂತಾದ ಮೂಲಸೌಕರ್ಯ ಯೋಜನೆಗಳ ಪ್ರಗತಿ ಕುರಿತಂತೆ ವಿವರವಾಗಿ ಚರ್ಚಿಸಿ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಕೋರಲಾಯಿತು ಎನ್ನಲಾಗಿದೆ.

