ಪರಶುರಾಂಪುರ ತಾಲೂಕ್ ಘೋಷಣೆ ಸೇರಿ ಚಳ್ಳಕೆರೆಗೆ ಯುಜಿಡಿಗೆ ಅನುದಾನ ನೀಡಿ-ರಘುಮೂರ್ತಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಳ್ಳಕೆರೆ ಕ್ಷೇತ್ರದಲ್ಲಿ ಚಳ್ಳಕೆರೆ ನಗರದ ಯುಜಿಡಿ ಕಾಮಗಾರಿಗೆ ಅನುದಾನ ಒದಗಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ವಿಧಾನಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ  ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದರು.

- Advertisement - 

ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಚಳ್ಳಕೆರೆ ನಗರದ ಅತಿ ಮುಖ್ಯವಾದ ಯೋಜನೆಯಾದ ನಗರಕ್ಕೆ ಯುಜಿಡಿ ತುರ್ತಾಗಿ ಅನುದಾನವನ್ನು ಒದಗಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಬಳಿ  ಪ್ರಸ್ತಾವನೆಯನ್ನು ಸಲ್ಲಿಸಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅನುದಾನ ನೀಡುತ್ತಾರೆ ಎಂಬ ಭರವಸೆ ಇದೆ ಎಂದರು.

ನಾನು ಚುನಾವಣೆ ಸಂದರ್ಭದಲ್ಲಿ ತಿಳಿಸಿದಂತೆ ಚಳ್ಳಕೆರೆ ಕ್ಷೇತ್ರದ ಪರಶುರಾಂಪುರ ತಾಲೂಕು ಕೇಂದ್ರವಾಗಿಸಲು ಸಿಎಂ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದು ಉತ್ತಮ ಸ್ಪಂದನೆ ದೊರಕಿದೆ.

- Advertisement - 

ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಚಿತ್ರದುರ್ಗ ಬ್ರಾಂಚ್ ಕ್ಯಾನಲ್ ಗೆ ನೀರು ಹರಿಸಲು ಮನವಿ ಮಾಡಿದ್ದೇವೆ ಎಂದರು.

ಚಿತ್ರದುರ್ಗ ನಗರದಲ್ಲಿನ ಜಿಲ್ಲಾಧಿಕಾರಿ ಕಚೇರಿ ಸ್ಥಳಾಂತರ ಬೇಡ, ಸಾಕಷ್ಟು ಸಾರ್ವಜನಿಕರಿಗೆ ಅನಾನುಕೂಲವಾಗುತ್ತದೆ. ಈಗ ನೂತನ ಕಟ್ಟಡವನ್ನು ಸರ್ಕಾರಿ ಮೆಡಿಕಲ್ ಕಾಲೇಜಿಗೆ ನೀಡವ ಕುರಿತು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದು ಮುಂದಿನ ದಿನಗಳಲ್ಲಿ ವೈದ್ಯಕೀಯ ಸಚಿವರು, ಕಂದಾಯ ಸಚಿವರ ಜೊತೆ ಜಿಲ್ಲೆಯ ಸಚಿವರು ಮತ್ತು ಶಾಸಕರು ಸಭೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಎಲ್ಲಾ ವಿಚಾರಗಳನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದು ಎಲ್ಲಾದಕ್ಕೂ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್
, ಶಾಸಕರಾದ ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ ಪಪ್ಪಿ ಇದ್ದರು.

 

 

 

Share This Article
error: Content is protected !!
";