ಡೆಂಗ್ಯೂ ಜ್ವರ ಹರಡದಂತೆ ಮುಂಜಾಗ್ರತೆ ವಹಿಸಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗ ನಗರದ ಮಾರುತಿ ನಗರ ಆರೋಗ್ಯ ಕೇಂದ್ರ ವ್ಯಾಪ್ತಿಯ ಈಶ್ವರ್ ಬಡಾವಣೆ ಸಮೀಪ ಇರುವ ನಗರದ ಸರ್ಕಾರಿ ಬಿಸಿಎಂ ಹಾಸ್ಟೆಲ್ ನಲ್ಲಿ ಡೆಂಗ್ಯೂ ವಿರೋಧಿ ಮಾಸಚರಣೆ ಪ್ರಯುಕ್ತ ಡೆಂಗ್ಯೂ ಜ್ವರ ಹರಡುವ ವಿಧಾನ, ಜ್ವರದ ಲಕ್ಷಣಗಳು, ತಡೆಗಟ್ಟುವ ಕ್ರಮಗಳು ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಕ್ಕಳಿಗೆ ಜಿಲ್ಲಾ ಸಿಎಂಡಿ ವಿಭಾಗದ ಅಶೋಕ ಎಸ್ ತಿಳಿಸಿದರು.

ಆರೋಗ್ಯ ನಿರೀಕ್ಷಣಾಧಿಕಾರಿ ರಂಗಾರೆಡ್ಡಿ ಮತನಾಡಿ ಅಡಿಗೆ ಮಾಡುವ ಸಹಾಯಕರಿಗೆ ಸ್ವಚ್ಛತೆ ಹಾಗೂ ವೈಯಕ್ತಿಕ ಸ್ವಚ್ಛತೆ ಬಗ್ಗೆ ತಿಳಿಸಿದರು.

- Advertisement - 

ಆರೋಗ್ಯ ನಿರೀಕ್ಷಣಾಧಿಕಾರಿ ರುದ್ರಮುನಿ ವಸತಿ ನಿಲಯದ ಅವರಣದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕೆಂದು ಸಂಕ್ಷಿಪ್ತವಾಗಿ ತಿಳಿಸಿದರು.
ಹಾಸ್ಟೆಲ್ ಸಿಬ್ಬಂದಿ ವರ್ಗದವರಿಗೆ ಸಾಂಕ್ರಾಮಿಕ ರೋಗಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಯಿತು.

 ವಸತಿ ನಿಲಯದ ಸಿಬ್ಬಂದಿಗಳು, ಹಾಸ್ಟೆಲ್ ವಿದ್ಯಾರ್ಥಿಗಳು ಹಾಜರಾಗಿದ್ದರು. ಆಶಾ ಕಾರ್ಯಕರ್ತೆಯಾದ ನೇತ್ರಾವತಿ ಹಾಜರಾಗಿದ್ದರು.

- Advertisement - 

 

 

 

Share This Article
error: Content is protected !!
";