ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ರೈತರಿಗೆ ರಸಗೊಬ್ಬರ ಕೊಡಲು ಹಿಂದೇಟು ಹಾಕುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಕೇಂದ್ರ ಸರ್ಕಾರ ಗೊಬ್ಬರ ಕೊಟ್ಟಿಲ್ಲ, ಕೊಟ್ಟಿಲ್ಲ ಎನ್ನುತ್ತಲೇ,
ಕೇಂದ್ರ ಸರ್ಕಾರದಿಂದ ಬಂದಿರುವ ಯೂರಿಯಾವನ್ನು ರಾತ್ರೋರಾತ್ರಿ ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ರಾಜ್ಯಾದ್ಯಂತ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರು ದಿನಗಟ್ಟಲೇ ಕಾದರೂ ಗೊಬ್ಬರ ಸಿಗದೇ ಪರದಾಡುತ್ತಿದ್ದಾರೆ.
ರೈತ ವಿರೋಧಿ ಸಿದ್ದರಾಮಯ್ಯ ಸರ್ಕಾರ, ಮೈಸೂರು ಜಿಲ್ಲೆಯ ನಂಜನಗೂಡಿನ ಗೋದಾಮಿನಿಂದ 15 ಟನ್ ಗೊಬ್ಬರವನ್ನು ಕೇರಳಕ್ಕೆ ಕಳ್ಳಸಾಗಣೆ ಮಾಡಿದೆ. ಇದು ರಾಜ್ಯದ ರೈತರಿಗೆ ಮಾಡಿರುವ ದ್ರೋಹವಾಗಿದೆ ಎಂದು ಜೆಡಿಎಸ್ ಕಿಡಿಕಾರಿದೆ.

