ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮ ಮಾಡಿ ರಾತ್ರೋರಾತ್ರಿ ಸಮಾಧಿ ತೆರವುಗೊಳಿಸಲಾಗಿದೆ.
ನಿರ್ದೇಶಕ ರವಿ ಶ್ರೀವತ್ಸ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮ ಮಾಡಿದ್ದಕ್ಕಾಗಿ ರವಿ ಶ್ರೀವತ್ಸ ಅವರು ಕಣ್ಣೀರು ಹಾಕಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ದಿನವೇ ಅವರು ಅಭಿಮಾನಿಗಳಿಗೆ ತೀವ್ರ ನೋವಿನ ಸುದ್ದಿ ತಿಳಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿ ಸ್ಥಳಕ್ಕೆ ಅಭಿಮಾನಿಗಳಿಗೆ ಪ್ರವೇಶ ಸಿಗುತ್ತಿಲ್ಲ. ಈಗಾಗಲೇ ಮೈಸೂರಿನಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಆಗಿದೆ. ಆದರೂ ಕೂಡ ಅಂತ್ಯ ಸಂಸ್ಕಾರ ನಡೆದ ಸ್ಥಳದ ಬಗ್ಗೆ ಅಭಿಮಾನಿಗಳಿಗೆ ಭಾವನಾತ್ಮಕ ನಂಟು ಇರುತ್ತದೆ ರವಿ ಶ್ರೀವತ್ಸ ನೋವು ತೋಡಿಕೊಂಡಿದ್ದಾರೆ.
ನಮ್ಮ ದೇವರ ಗುಡಿಯನ್ನು ನೆಲಸಮ ಮಾಡಿದ್ದಾರೆ. ಇದು ನನ್ನ ಯಜಮಾನರು ಮಲಗಿದ್ದಂತಹ ಜಾಗ. ಅಲ್ಲೊಂದು ಪುಟ್ಟ ಗುಡಿ ಇತ್ತು. ಸಣ್ಣ ಗೋಪುರ ಇತ್ತು. ಆ ಗೋಪುರವನ್ನು ರಾತ್ರೋರಾತ್ರಿ ನೆಲಸಮ ಮಾಡಿದ್ದಾರೆ. ನಮ್ಮ ಯಜಮಾನರನ್ನು ನೋಡಲು ಬಂದರೆ ಗೇಟ್ ಕೂಡ ತೆಗೆಯುತ್ತಿಲ್ಲ. ಪೊಲೀಸರು ಸರ್ಪಗಾವಲು ಹಾಕಿಕೊಂಡು ಕೂತ್ತಿದ್ದಾರೆ ಎಂದು ರವಿ ಶ್ರೀವತ್ಸ ಕಿಡಿ ಕಾರಿದ್ದಾರೆ.

