ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ಮೋದಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೆಎಸ್​ಆರ್​ ರೈಲು ನಿಲ್ದಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.

ಬೆಂಗಳೂರಿನಿಂದ ಬೆಳಗಾವಿ, ಅಮೃತಸರದಿಂದ ಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗ್ಪುರ (ಅಜ್ನಿ) ದಿಂದ ಪುಣೆ ಹೋಗುವ ವಂದೇ ಭಾರತ್ ರೈಲಿ​ಗೆ ಹಸಿರು ನಿಶಾನೆ ತೋರಿದರು.
ಬೆಂಗಳೂರು-ಬೆಳಗಾವಿಗೆ ತೆರಳುವ ಬಹುನಿರೀಕ್ಷಿತ ವಂದೇ ಭಾರತ್ ರೈಲು ರಾಜ್ಯದ 11ನೇ ಹೊಸ ವಂದೇ ಭಾರತ್ ರೈಲು ಸೇವೆಯಾಗಿದೆ.
ವಂದೇ ಭಾರತ್ ರೈಲು ಬೆಳಗಾವಿ-ಬೆಂಗಳೂರು ಮಾರ್ಗವನ್ನು ಒಟ್ಟಾರೆ 8.50 ಗಂಟೆಗಳಲ್ಲಿ ಕ್ರಮಿಸಲಿದೆ ಎನ್ನಲಾಗಿದೆ.

- Advertisement - 

ಸಂವಾದ :
ನೂತನ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ರೈಲಿನೊಳಗೆ ಹೆಜ್ಜೆ ಹಾಕಿದ ಪ್ರಧಾನಿ ಮೋದಿ ಅವರು ಕೂತಿದ್ದ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಖುಷಿ ಹಂಚಿಕೊಂಡ ಪ್ರಸಂಗ ನಡೆಯಿತು.‌

6 ದಿನ ಸಂಚಾರ:
ವಂದೇ ಭಾರತ್ ರೈಲು ಬುಧವಾರ ಹೊರತುಪಡಿಸಿ ವಾರದ ಆರು ದಿನಗಳು ಮಾತ್ರ ಬೆಂಗಳೂರು-ಬೆಳಗಾವಿ ಸಂಚರಿಸಲಿದೆ.

- Advertisement - 

ಪ್ರತಿದಿನ ಬೆಳಗ್ಗೆ 5.20ಕ್ಕೆ ಬೆಳಗಾವಿಯಿಂದ ಬಿಡುವ ವಂದೇ ಭಾರತ್ ಮಧ್ಯಾಹ್ನ 1.50ಕ್ಕೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್‌) ರೈಲು ನಿಲ್ದಾಣಕ್ಕೆ ತಲುಪಲಿದೆ.
ಮತ್ತೆ ಮಧ್ಯಾಹ್ನ 2.20ಕ್ಕೆ ಕೆಎಸ್‌ಆರ್ ಬೆಂಗಳೂರಿನಿಂದ ವಾಪಸ್‌ ಹೊರಡಲಿದ್ದು
, ರಾತ್ರಿ 10.40ಕ್ಕೆ ಬೆಳಗಾವಿ ತಲುಪಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ನಿಲುಗಡೆ?
ಬೆಳಗಾವಿಯಿಂದ ಹೊರಡುವ ವಂದೇ ಭಾರತ್ ರೈಲು ಧಾರವಾಡ
, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಎಸ್‌ಎಂಎಂ ಹಾವೇರಿ, ದಾವಣಗೆರೆ, ತುಮಕೂರು, ಯಶವಂತಪುರ ರೈಲು ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.
ಬೆಂಗಳೂರಿನಿಂದ ಹೊರಡುವ ರೈಲು ಮಧ್ಯಾಹ್ನ 2.28ಕ್ಕೆ ಹೊರಟು ಯಶವಂತಪುರ
, ತುಮಕೂರು, ದಾವಣಗೆರೆ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ನಿಲುಗಡೆಯಾಗಲಿದೆ.‌

ಟಿಕೆಟ್ ದರ:
ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲು ಸುಮಾರು 8 ಜಿಲ್ಲೆಗಳನ್ನು ಹಾದು ಹೋಗಲಿದೆ. ಒಟ್ಟು 8 ಬೋಗಿಗಳನ್ನು ಒಳಗೊಂಡಿದ್ದು ಇದರಲ್ಲಿ 4 ಮೋಟಾರ್ ಕಾರ್‌
, 1 ಟ್ರೈಲಿಂಗ್ ಕಾರ್, 1 ಎಕ್ಸಿಕ್ಯುಟಿವ್ ಕ್ಲಾಸ್/ಟ್ರೈಲಿಂಗ್ ಕಾರ್ ಮತ್ತು 2 ಡ್ರೈವಿಂಗ್ ಟ್ರೈಲರ್ ಕಾರ್‌ಗಳನ್ನು ಹೊಂದಿದೆ.
ಬೆಂಗಳೂರು-ಬೆಳಗಾವಿ ಚೇರ್ ಕಾರ್ (ಸಿಸಿ) ಟಿಕಿಟ್ ದರ 1,264 ರೂ. ಹಾಗೂ ಎಕ್ಸಿಕ್ಯುಟಿವ್ ಚೇರ್ ಕಾರ್ (ಇಸಿ) ಟಿಕೆಟ್ ದರ 2,535 ರೂ. ನಿಗದಿ ಮಾಡಲಾಗಿದೆ.

ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ವಿ. ಸೋಮಣ್ಣ, ಸಚಿವ ದಿನೇಶ್ ಗುಂಡೂರಾವ್, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಸಂಸದ ಪಿ. ಸಿ. ಮೋಹನ್ ಸೇರಿದಂತೆ ಇದ್ದರು.

 

Share This Article
error: Content is protected !!
";