ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೂಡಿ ಭಾನುವಾರ ಲೋಕಾರ್ಪಣೆಗೊಳಿಸಿದರು.
7,610 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಆರ್.ವಿ ರಸ್ತೆ – ಬೊಮ್ಮಸಂದ್ರ ನಡುವಿನ 19.15 ಕಿ.ಮೀ ಉದ್ದದ ಈ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳು ಕಾರ್ಯಾಚರಣೆ ಮಾಡಲಿವೆ.
ಬೆಂಗಳೂರಿನ ಉದ್ದಗಲಕ್ಕೂ ಮೆಟ್ರೋ ಮಾರ್ಗವನ್ನು ವಿಸ್ತರಣೆ ಮಾಡುವ ಮೂಲಕ ಸಂಚಾರ ದಟ್ಟಣೆ ತಗ್ಗಿಸುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

