ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಮಂಡಲದ ಮುಂಗಾರು ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷ ಹಾಗೂ ಬಿಜೆಪಿ ಪಕ್ಷಗಳ (NDA) ಮೈತ್ರಿಕೂಟದ ಸಮನ್ವಯ ಸಭೆ ಅತ್ಯಂತ ಯಶಸ್ವಿಯಾಗಿ ಜರುಗಿತು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ನಡೆಸುವ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು ಎಂದು ಅವರು ಹೇಳಿದರು.
ಪ್ರತಿಪಕ್ಷ ನಾಯಕ ಆರ್.ಅಶೋಕ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಅವರು,
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ಮಾಜಿ ವಿಧಾನ ಪರಿಷತ್ ನಾಯಕ ತಿಪ್ಪೇಸ್ವಾಮಿ, ಮಾಜಿ ಸಚಿವ ಸಿ.ಟಿ ರವಿ , ಆರಗ ಜ್ಞಾನೇಂದ್ರ, ಸುನೀಲ್ ಕುಮಾರ್ ಕಾರ್ಕಳ, ವಿರೋಧ ಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ್, ಶಾಸಕರುಗಳಾದ ಎಂ.ಟಿ ಕೃಷ್ಣಪ್ಪ,
ಶಾರದಾ ಪೂರ್ಯ ನಾಯಕ್, ಜಿ.ಡಿ.ಹರೀಶ್ ಗೌಡ, ಶರಣ್ ಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಟಿ ಎನ್ ಜವರಾಯಿಗೌಡ, ರವಿಕುಮಾರ್ ಅವರು ಸೇರಿ ಮೈತ್ರಿ ಪಕ್ಷಗಳ ಪ್ರಮುಖರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

