ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ!?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೆಎನ್​ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.

ಸಚಿವ ಕೆಎನ್​ ರಾಜಣ್ಣ ಮಾತನಾಡಿ, ರಾಜೀನಾಮೆ ನೀಡಿರುವ ಬಗ್ಗೆ ಒಪ್ಪಿಕೊಳ್ಳದೆ, ತಿರಸ್ಕರಿಸದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸ್ಪಷ್ಟಪಡಿಸುವುದಾಗಿ ಹೇಳುವ ಮೂಲಕ ಊಹಾಪೋಹಗಳಿಗೆ ಪುಷ್ಠಿ ನೀಡಿದ್ದಾರೆ.

- Advertisement - 

ಹೈಕಮಾಂಡ್ ಯಾವ ವಿಚಾರಕ್ಕೆ​ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ. ಆದರೆ ಹೈಕಮಾಂಡ್ ಹೇಳಿದ ಮೇಲೆ ಅಲ್ವಾ ಮಾತನಾಡುವುದು ಎಂದು ಹೇಳಿದರು.

ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿದ್ದಾರೆ, ಅಲ್ಲೇ ಭೇಟಿಯಾಗುವೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಮಾತನಾಡುತ್ತೇನೆ. ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.

- Advertisement - 

ರಾಜೀನಾಮೆ ವಿಚಾರ ತಳ್ಳಿಹಾಕಿದ ಪುತ್ರ ರಾಜೇಂದ್ರ-
ತಮ್ಮ ತಂದೆ ಸಹಕಾರ ಸಚಿವ ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬುವುದು ಸುಳ್ಳು. ನಾನು ಈಗಷ್ಟೇ ತಂದೆ ಜೊತೆ ಮಾತನಾಡಿದ್ದೇನೆ. ಆ ರೀತಿ ಏನೂ ಇಲ್ಲ ಅಂತ ನಮ್ಮ ತಂದೆ ಹೇಳಿದ್ದಾರೆ ಎಂದು ಕೆ.ಎನ್.ರಾಜಣ್ಣ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಸ್ಪಷ್ಟ ಪಡಿಸಿದ್ದಾರೆ.

 

 

Share This Article
error: Content is protected !!
";