ಪಿಡಿಒ ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ

ಹೈದ್ರಾಬಾದ್ ಕರ್ನಾಟಕ ಸ್ಥಳೀಯ ವೃಂದದ-97 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಯನ್ನು ಆಗಸ್ಟ್ 29 ಮತ್ತು 30 ರಂದು ಬೆಂಗಳೂರಿನ ಆಯೋಗದ ಕೇಂದ್ರ ಕಛೇರಿಯಲ್ಲಿ ನಡೆಸಲಾಗುವುದು.

- Advertisement - 

ನೇಮಕಾತಿಯ ಮೂಲ ದಾಖಲೆಗಳ ಪರಿಶೀಲನಾ ವೇಳಾಪಟ್ಟಿಯನ್ನು ಆಯೋಗದ ವೆಬ್‍ಸೈಟ್ http://kpsc.kar.nic.in  ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";