ಎರಡೆರಡು ಸಲ ಭೂ ಪರಿಹಾರ ತಪ್ಪಿತಸ್ಥ ಅಧಿಕಾರಿಗಳಿಗೆ ರಕ್ಷಣೆ ಇಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನವಾದ ಭೂಮಿಗೆ ಎರಡೆರಡು ಸಲ ಪರಿಹಾರ ತಪ್ಪಿತಸ್ಥ ಅಧಿಕಾರಿಗಳಿಗೆ ರಕ್ಷಣೆ ಇಲ್ಲ
; ಹೆಚ್ಚುವರಿ ಹಣ ವಸೂಲು! ಮಾಡಲಾಗುತ್ತಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ವಿಧಾನ ಪರಿಷತ್ತಿನ ಸದಸ್ಯ ಎಸ್‌ ಎಸ್‌ ಭೋಜೇಗೌಡ ಅವರು ಭೂ ಸ್ವಾಧೀನ ಪ್ರಕ್ರಿಯೆಗೆ ನೀಡಲಾಗುವ ಪರಿಹಾರ ಸಂಬಂಧಿಸಿದಂತೆ ಗಮನಸೆಳೆಯುವ ಸೂಚನೆಗೆ ಸಚಿವರು ಉತ್ತರಿಸಿದರು.

ಕೈಗಾರಿಕಾ ಉದ್ದೇಶಗಳಿಗೆಂದು KIADB ಮೂಲಕ ಭೂಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆದರೆ ಕೆಲವೆಡೆಗಳಲ್ಲಿ ರೈತರಿಗೆ ಅಧಿಕಾರಿಗಳ ತಪ್ಪಿನಿಂದ ಹಿಂದಿನ ಸರಕಾರದ ಅವಧಿಯಲ್ಲಿ ಎರಡೆರಡು ಬಾರಿ ಪರಿಹಾರ ಕೊಡಲಾಗಿದೆ.

- Advertisement - 

ಇಂತಹ ಪ್ರಕರಣಗಳ ಸಂಬಂಧ ಈಗಾಗಲೇ ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಯುತ್ತಿದ್ದು, ಒಬ್ಬರು ಜೈಲಿನಲ್ಲೂ ಇದ್ದಾರೆ. ಇಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಜೊತೆಗೆ, ಹೆಚ್ಚುವರಿಯಾಗಿ ಪಾವತಿಯಾಗಿರುವ ಹಣವನ್ನು ಕಾನೂನು ರೀತ್ಯಾ ವಸೂಲು ಮಾಡಲಾಗುವುದು ಎಂದು ಸಚಿವರು ಹೇಳಿದರು.

ಧಾರವಾಡ:(ಕೆಳಗೇರಿ, ಮುಮ್ಮಿಗಟ್ಟಿ, ಕೋಟೂರು, ಬೇಲೂರು): ₹19.99 ಕೋಟಿ+ ಹೆಚ್ಚುವರಿ ಪಾವತಿ ದೃಢಪಟ್ಟಿದೆ. ರಾಮನಗರ(ಬನ್ನಿಕುಪ್ಪೆ): ₹1.58 ಕೋಟಿ ಡಬಲ್ ಪಾವತಿ, ಹೈಕೋರ್ಟ್ ವಿಚಾರಣೆ ಮುಂದುವರಿಯುತ್ತಿದೆ. ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ. ಹೆಚ್ಚುವರಿ ಹಣ ಕಾನೂನು ಪ್ರಕಾರ ಹಿಂಪಡೆಯಲಾಗುವುದು ಎಂದು ಸದನಕ್ಕೆ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದರು.

- Advertisement - 

 

 

Share This Article
error: Content is protected !!
";