ದೇಶದ ಭವಿಷ್ಯ ಸದೃಢಗೊಳಿಸಲು ಯುವಜನರು ನಿರ್ಣಾಯಕ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಯುವಜನತೆ ದೇಶದ ಭವಿಷ್ಯವನ್ನು ಸದೃಢಗೊಳಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ. ಶಿಸ್ತುಬದ್ಧ ಜೀವನವನ್ನು ರೂಢಿಸಿಕೊಳ್ಳುವ ಮೂಲಕ ದೇಶದ ಬೆಳವಣಿಗೆಗೆ ಕೊಡುಗೆಯನ್ನು ನೀಡಬಹುದಾಗಿದೆ ಎಂದು ಆರ್‌ಎಲ್‌ಜೆಐಟಿ ಅಕಾಡೆಮಿಕ್‌ ಡೀನ್‌ ಡಾ.ಎಂ.ಶ್ರೀನಿವಾಸರೆಡ್ಡಿ ಹೇಳಿದರು.
 

ಇಲ್ಲಿನ ಲಯನ್ಸ್ ಕ್ಲಬ್‌ ಆಫ್‌ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ನೇತೃತ್ವದಲ್ಲಿ ಎಸ್‌ಡಿಯುಐಎಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಯುವ ದಿನಾಚರಣೆ ಹಾಗೂ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

- Advertisement - 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲಯನ್ಸ್‌ ಕ್ಲಬ್‌ ಅಧ್ಯಕ್ಷ ಪ್ರೊ.ರವಿಕಿರಣ್‌ ಕೆ.ಆರ್ ಮಾತನಾಡಿ, 1998ರಲ್ಲಿ ಪೋರ್ಚುಗಲ್‌ ನಲ್ಲಿ ನಡೆದ ಅಂತಾರಾಷ್ಟ್ರೀಯ ಯುವ ಸಮ್ಮೇಳನದಲ್ಲಿ ಯುವ ಸಬಲೀಕರಣದ ಆಶಯದೊಂದಿಗೆ ವಿಶ್ವ ಸಂಸ್ಥೆಯು ಅಂತಾರಾಷ್ಟ್ರೀಯ ಯುವ ದಿನಾಚರಣೆಯನ್ನು ಘೋಷಿಸಿತು. ಯುವಜನರು ಮಾದಕ ದ್ರವ್ಯಗಳು ಸೇರಿದಂತೆ ಸಮಾಜ ವಿರೋದಿ ಕೃತ್ಯಗಳಲ್ಲಿ ಭಾಗಿಯಾಗುವ ಯಾವುದೇ ಸಾಧ್ಯತೆಗಳನ್ನು ತಡೆಯುವುದು ಪ್ರತಿಯೊಬ್ಬರ ಆದ್ಯತೆಯಾಗಬೇಕು ಎಂದು ತಿಳಿಸಿದರು. 

ರಾಷ್ಟ್ರೀಯ ಗ್ರಂಥಪಾಲಕರ ದಿನ:
ಇದೇ ವೇಳೆ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯ ಅಂಗವಾಗಿ ಶ್ರೀ ದೇವರಾಜ್‌ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಗ್ರಂಥಪಾಲಕಿ ಎಚ್.ಕೆ.ಪ್ರೇಮ ಅವರನ್ನು ಅಭಿನಂದಿಸಲಾಯಿತು. ಗ್ರಂಥ ಪಾಲಕರ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಲಾಯಿತು.

- Advertisement - 

ಕಾಲೇಜಿನ ಪ್ರಾಂಶುಪಾಲ ಡಾ.ಆರ್.ನಾಗರಾಜ್‌, ದೇವರಾಜ್‌ ಅರಸ್‌ ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ, ಎಸ್‌ಡಿಯುಐಎಂ ಉಪಪ್ರಾಂಶುಪಾಲ ಕೆ.ದಕ್ಷಿಣಾಮೂರ್ತಿ, ಲಯನ್ಸ್‌ ಕ್ಲಬ್‌ ಕಾರ್ಯದರ್ಶಿ ಸುಮಾ.ಎ.ಎಸ್, ಎನ್‌ಎಸ್‌ಎಸ್‌ ಅಧಿಕಾರಿ ಕೆ.ಸಿ.ಲಕ್ಷ್ಮೀಶ್, ನಿರ್ವಹಣಾ ವಿಭಾಗ ಮುಖ್ಯಸ್ಥೆ ಪಿ.ಚೈತ್ರ ಮತ್ತಿತರರು ಭಾಗವಹಿಸಿದ್ದರು. 

 

 

Share This Article
error: Content is protected !!
";