ಅತ್ಯಾಧುನಿಕ ಆಸ್ಪತ್ರೆ ಲೋಕಾರ್ಪಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾಕ್ರಾ
–IKOC ಆಸ್ಪತ್ರೆ ಅತ್ಯಾಧುನಿಕ ಚಿಕಿತ್ಸೆ, ನವೀನ ತಂತ್ರಜ್ಞಾನ ಮತ್ತು ಪರಿಣಿತ ವೈದ್ಯಕೀಯ ಸೇವೆಗಳಿಗಾಗಿ ಪ್ರಸಿದ್ಧವಾಗಿದ್ದು ಗುರುವಾರ ಬೆಂಗಳೂರಿನ ಹೆಚ್‌ಎಸ್‌ಆರ್ ಬಡಾವಣೆಯಲ್ಲಿ ನೂತನ ಶಾಖೆಯನ್ನು ಆರಂಭಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ವಿಶ್ವದರ್ಜೆಯ ಸೇವೆಗಳನ್ನು ಒದಗಿಸುತ್ತಿರುವ ಈ ಆಸ್ಪತ್ರೆಯ ನೂತನ ಶಾಖೆಯನ್ನು ಉದ್ಘಾಟಿಸಿ, ಡಾ. ಚಂದ್ರಶೇಖರ್ ಸೇರಿದಂತೆ ಎಲ್ಲ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ಅವರು ಹೃತ್ಪೂರ್ವಕವಾಗಿ ಅಭಿನಂದಿಸಿದರು.

- Advertisement - 

ರೋಗಿಗಳ ಆರೋಗ್ಯವನ್ನು ಉತ್ತಮಪಡಿಸುವ ದಿಶೆಯಲ್ಲಿ, ಗುಣಮಟ್ಟದ ವೈದ್ಯಕೀಯ ಸೌಕರ್ಯಗಳನ್ನು, ಮಾನವೀಯತೆಯಿಂದ ಕೂಡಿದ ಸೇವೆಯೊಂದಿಗೆ ಈ ಆಸ್ಪತ್ರೆ ಮಾದರಿಯಾಗಿ ಕಾರ್ಯನಿರ್ವಹಿಸಲಿ.

ಈ ನೂತನ ಶಾಖೆ ಬೆಂಗಳೂರಿನ ಆರೋಗ್ಯ ಸೇವಾ ಕ್ಷೇತ್ರಕ್ಕೆ ಹೊಸ ಶಕ್ತಿ ಮತ್ತು ಭರವಸೆ ನೀಡಲಿದೆ ಎಂದು ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

- Advertisement - 

 

Share This Article
error: Content is protected !!
";