ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಹೋಬಳಿಯ ಯದ್ದಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಭಕ್ತಿ ಭಾವದಿಂದ ಜರುಗಿತು. ಶಾಲೆಯ ಆವರಣದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿ ಘೋಷಣೆಗಳಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಪಂಚಾಯಿತಿ ಸದಸ್ಯರು ಭಾಗವಹಿಸಿ ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ಮನವರಿಕೆ ಮಾಡಿಕೊಟ್ಟರು. ಶಾಲಾ ಆವರಣ ಮಕ್ಕಳ ಹರ್ಷೋದ್ಗಾರ, “ಭಾರತ ಮಾತಾ ಕಿ ಜೈ” ಘೋಷಣೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನೆಡೆದವು.
ಮಕ್ಕಳು ದೇಶಭಕ್ತಿ ಗೀತೆ, ನೃತ್ಯ ಮತ್ತು ನಾಟಕಗಳ ಮೂಲಕ ದೇಶಪ್ರೇಮವನ್ನು ವ್ಯಕ್ತಪಡಿಸಿ ಎಲ್ಲರ ಮನ ಗೆದ್ದರು. ಗ್ರಾಮಸ್ಥರು, ಪೋಷಕರು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಿನದ ಸಂಭ್ರಮವನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಲಘುಮಯ್ಯ ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದಂತ ಮುನಿ ಅಕ್ಕಯಮ್ಮ ಎಸ್ ಟಿ ಎಂ ಸಿ ಅಧ್ಯಕ್ಷರಾದಂತ ನರಸಪ್ಪ ಶಾಲಾ ಶಿಕ್ಷಕರ ಆದಂತಹ ಈಶ್ವರ ಆಶಾ ಕಾರ್ಯಕರ್ತೆ ಚಂದ್ರಕಲಾ ಮತ್ತು ಊರಿನ ಗ್ರಾಮಸ್ಥರು ಹಾಜರಿದ್ದರು.

