ಆರ್‌ಎಸ್‌ಎಸ್‌ ಭಾರತದ ತಾಲಿಬಾನ್‌ಇದ್ದಂತೆ-ಹರಿಪ್ರಸಾದ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆರ್‌ಎಸ್‌ಎಸ್‌ಭಾರತದ ತಾಲಿಬಾನ್‌ಇದ್ದಂತೆ ಎಂದು ವಿಧಾನ ಪರಿಷತ್‌ಸದಸ್ಯ ಬಿಕೆ ಹರಿಪ್ರಸಾದ್‌ಗಂಭೀರ ಆರೋಪ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್‌ಎಸ್‌ಎಸ್ ಹೊಗಳಿದ್ದಕ್ಕಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಹರಿ ಪ್ರಸಾದ್, ಆರ್‌ಎಸ್‌ಎಸ್ ನವರು ದೇಶದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ನಾನು ಆರ್‌ಎಸ್‌ಎಸ್ ಅನ್ನು ತಾಲಿಬಾನ್‌ಗೆ ಹೋಲಿಸುತ್ತೇನೆ. ಅವರು ಭಾರತೀಯ ತಾಲಿಬಾನ್‌ಗಳು ಮತ್ತು ಪ್ರಧಾನಿ ಅವರನ್ನು ಕೆಂಪು ಕೋಟೆಯಿಂದ ಶ್ಲಾಘಿಸುತ್ತಿದ್ದಾರೆ ಎಂದು ಹರಿಪ್ರಸಾದ್ ದೂರಿದ್ದಾರೆ.

- Advertisement - 

ಸ್ವಾತಂತ್ರ ಹೋರಾಟದಲ್ಲಿ ಸಂಘ ಪರಿವಾರದವರು ಪಾಲ್ಗೊಂಡಿದ್ದಾರೆಯೇ ಎಂದು ಪ್ರಶ್ನಿಸಿದ ಹರಿಪ್ರಸಾದ್, ಆರ್​​ ಎಸ್​ಎಸ್​ ನೊಂದಣಿ ಆಗಿರುವ ಸಂಘಟನೆ ಅಲ್ಲ. ಇಡೀ ದೇಶದಲ್ಲಿ ದೊಡ್ಡ ಸಂಘಟನೆ ಎಂದು ಬಿಂಬಿಸಿಕೊಳ್ಳುತ್ತಾರೆ. ಆದರೆ, ಅವರಿಗೆ ಹಣ ಎಲ್ಲಿಂದ ಬರುತ್ತೆ. ಇತಿಹಾಸವನ್ನು ತಿರುಚುವುದರಲ್ಲಿ ಆರ್​ ಎಸ್​​ಎಸ್​ ಹಾಗೂ ಬಿಜೆಪಿಯವರು ಪ್ರವೀಣರು ಎಂದು ವಾಗ್ದಾಳಿ ಮಾಡಿದರು.

ಆರ್​ ಎಸ್​ಎಸ್ ಕಚೇರಿ ಮೇಲೆ ಕಳೆದ 52 ವರ್ಷಗಳಿಂದ ತ್ರಿವರ್ಣಧ್ವಜ ಹಾರಿಸಿಲ್ಲ ಏಕೆ? ದೇಶಕ್ಕಾಗಿ ಪ್ರಾಣ ತೆತ್ತವರ ಹೆಸರನ್ನು ಹೇಳುವುದನ್ನು ಬಿಟ್ಟು ಓಲೈಕೆಗಾಗಿ ಮೋದಿಯವರು ಆರ್​ ಎಸ್​ಎಸ್​ ಹೊಗಳಿದ್ದು ಸರಿಯಲ್ಲ ಎಂದು ಹರಿಹಾಯ್ದರು.

- Advertisement - 

ಮುಹಮ್ಮದ್ ಅಲಿ ಜಿನ್ನಾ, ಕಾಂಗ್ರೆಸ್ ಮತ್ತು ಆಗಿನ ವೈಸ್‌ರಾಯ್ ಲಾರ್ಡ್ ಮೌಂಟ್‌ಬ್ಯಾಟನ್ ಅವರು ದೇಶ ವಿಭಜನೆಗೆ ಕಾರಣ ಎಂದು ಎನ್‌ಸಿಇಆರ್‌ಟಿ ಪಠ್ಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಇತಿಹಾಸ ತಿರುಚುವ ಮಾಸ್ಟರ್ಸ್ ಎಂದು ತಿರುಗೇಟು ನೀಡಿದರು.

ವಿಭಜನೆಗಾಗಿ ಬಂಗಾಳದಲ್ಲಿ ಮೊದಲ ನಿರ್ಣಯವನ್ನು ಮಂಡಿಸಿದವರು ಫಜ್ಲುಲ್ ಹಕ್ ಮತ್ತು ಶ್ಯಾಮ ಪ್ರಸಾದ್ ಮುಖರ್ಜಿ. ಜಿನ್ನಾ ಮತ್ತು ಸಾವರ್ಕರ್ ಎರಡೂ ಧರ್ಮಗಳಿಗೆ ಪ್ರತ್ಯೇಕ ರಾಜ್ಯ ಬೇಕು ಎಂದು ಅಭಿಪ್ರಾಯಪಟ್ಟರು. ಅವರು ಅದಕ್ಕೆ ಕಾಂಗ್ರೆಸ್ ಅನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ತಿರುಗೇಟು
ಆರ್‌ಎಸ್‌ಎಸ್‌ನ್ನು ತಾಲಿಬಾನ್‌ಗೆ ಹೋಲಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ಬಿ ಕೆ ಹರಿಪ್ರಸಾದ್ ಹಾಗೂ ಸಿಎಂ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಒಂದು ಕಾಲದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ಸಿನಿಂದ ಪಾಠ ಕಲಿಯಬೇಕಾಗಿಲ್ಲ.

ರಾಷ್ಟ್ರೀಯ ಸ್ವಯಂಸೇವಕ ಸಂಘವು ದೇಶಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದೆ. ಕಾಂಗ್ರೆಸ್ ಪ್ರತಿಯೊಂದು ರಾಷ್ಟ್ರೀಯತಾವಾದಿ ಸಂಘಟನೆಯನ್ನು ನಿಂದಿಸುತ್ತದೆ. ನಿಂದಿಸುವುದು ಕಾಂಗ್ರೆಸ್‌ನ ಚಾಳಿ. ಪಿಎಫ್‌ಐ ಮತ್ತು ಸೆಮಿಯಂತಹ ನಿಷೇಧಿತ ಮೂಲಭೂತವಾದಿ ಸಂಘಟನೆಗಳನ್ನು ಪ್ರೀತಿಸುತ್ತದೆ. ಅವರಿಗೆ 1963ರ ಘಟನೆ ನೆನಪಿಲ್ಲವೇ ಎಂದು ಬಿಜೆಪಿ ತಿರುಗೇಟು ನೀಡಿದೆ.

 

 

 

 

Share This Article
error: Content is protected !!
";