ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಸತ್ಯದ ಬಾಗಿಲು ತೆರೆಯಲಿದೆ ಧರ್ಮದ ಬೆಳಕು ಬೆಳಗಲಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.
ಪಕ್ಷದ ಕರಾವಳಿ ಭಾಗದ ನಮ್ಮೆಲ್ಲ ಶಾಸಕ ಮಿತ್ರರೊಂದಿಗೆ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯವರ ದರ್ಶನಾಶೀರ್ವಾದ ಪಡೆದು, ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದವನ್ನೂ ಸಹ ಪಡೆಯಲಾಯಿತು ಎಂದು ಅವರು ತಿಳಿಸಿದರು.
ನಾಡಿನ ಕೋಟ್ಯಂತರ ಭಕ್ತರ ಧಾರ್ಮಿಕ ಶ್ರದ್ಧಾ ಕೇಂದ್ರ ವಿರುದ್ಧ ಧರ್ಮಸ್ಥಳದ ಶ್ರೇಷ್ಠತೆಯನ್ನು ಎತ್ತಿ ಹಿಡಿಯಲು ಬಿಜೆಪಿ ಕಟ್ಟಿಬದ್ಧವಾಗಿ ಧರ್ಮಸ್ಥಳದ ಭಕ್ತರ ದನಿಯಾಗಿ ನಿಲ್ಲಲಿದೆ.
SIY ತನಿಖೆಯನ್ನು ಯಾರು ವಿರೋಧಿಸಿಲ್ಲ, ಸತ್ಯದ ಬಾಗಿಲು ತೆರೆಯಲಿದೆ, ಧರ್ಮಸ್ಥಳದ ಧರ್ಮದ ಬೆಳಕು ಬೆಳಗಲಿದೆ. ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧ ನಡೆಯುವ ಷಡ್ಯಂತ್ರಗಳಿಗೆ ಇನ್ನುಮುಂದೆ ತಕ್ಕ ಉತ್ತರ ಸಿಗಲಿದೆ. ರಾಜ್ಯ ಸರ್ಕಾರ ಧರ್ಮಸ್ಥಳದ ಹೆಸರಿನಲ್ಲಿ ಆಸಕ್ತ ಹಿತಾಸಕ್ತಿಗಳು ಸೃಷ್ಟಿಸಿರುವ ಗೊಂದಲಕ್ಕೆ ಅಂತಿಮ ತೆರೆ ಎಳೆಯುವ ನಿಟ್ಟಿನಲ್ಲಿ ಈವರೆಗಿನ SIT ತನಿಖೆಯ ವರದಿಯನ್ನು ಬಿಡುಗಡೆ ಮಾಡಲಿ ಎಂದು ಅವರು ಆಗ್ರಹ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಕರಾವಳಿ ಭಾಗದ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

