ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಸ್ಥಾಪನೆಗೆ ಶೀಘ್ರ ಕ್ರಮ-ಸಚಿವ ರಾಮಲಿಂಗಾರೆಡ್ಡಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೊಸಕೋಟೆ ತಾಲ್ಲೂಕಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ  ಕೆ.ಎಸ್.ಆರ್.ಟಿಸಿ ಬಸ್ ಡಿಪೋವನ್ನು ಶೀಘ್ರದಲ್ಲಿ ಸ್ಥಾಪಿಸಲು ಕ್ರಮ ವಹಿಸಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ  ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ   ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ  ಶರತ್ ಕುಮಾರ್ ಬಚ್ಚೇಗೌಡ ಇವರ ಪ್ರಶ್ನೆಗೆ ಉತ್ತರಿಸಿದ  ಸಾರಿಗೆ ಮತ್ತು ಮುಜರಾಯಿ  ಸಚಿವರು  ಹಾಲಿ ರಾಜ್ಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯಲ್ಲಿ ಒಟ್ಟು 83 ಘಟಗಳಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೆಲಮಂಗಲ ಹಾಗೂ ದೊಡ್ಡಬಳ್ಳಾಪುರದಲ್ಲಿ ಎರಡು ಘಟಕಗಳಿವೆ. 

- Advertisement - 

ಹೊಸಕೋಟೆಯಲ್ಲಿ 3.08 ಎಕರೆ/ಗುಂಟೆ ವಿಸ್ತೀರ್ಣದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೇಯ ಘಟಕವಿದೆ. ಹೊಸಕೋಟೆ ತಾಲ್ಲೂಕಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಸ್ಥಾಪನೆ ಮಾಡಿಕೊಡಲು ಶಾಸಕರು 2.50 ಎಕರೆ ಜಾಗವನ್ನು ಗುರುತಿಸಿದ್ದಾರೆ, ಸದರಿ ವಿಷಯವನ್ನು ಸಚಿವ ಸಂಪುಟದ ಮುಂದೆ ಪ್ರಸ್ತಾಪಿಸಿ ಬಸ್ ಡಿಪೋ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ವಿಧಾನಸಭೆಯಲ್ಲಿ ಉತ್ತರಿಸಿದರು.

- Advertisement - 
Share This Article
error: Content is protected !!
";