ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭರಮಸಾಗರ ಶಿಶು ಅಭಿವೃದ್ಧಿ ಯೋಜನೆ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ, 23 ಸಹಾಯಕಿರು ಸೇರಿ 30 ಹುದ್ದೆಗಳನ್ನು ಗೌರವ ಸೇವೆಯ ಆಧಾರದಲ್ಲಿ ನೇಮಕಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವೀತಿಯ ಪಿಯುಸಿ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. 19 ರಿಂದ 35 ವರ್ಷದೊಳಗಿನ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಸೆಪ್ಟೆಂಬರ್ 5 ಸಂಜೆ 5:30ರ ಒಳಗಾಗಿ ವೆಬ್‍ಸೈಟ್ https://karnemakaone.kar.inc.in/abcd/ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಬಳಕೆದಾರರ ಕೈಪಿಡಿಯಲ್ಲಿನ ಸೂಚನೆಗಳನ್ನು ಸ್ಪಷ್ಟಾವಾಗಿ ಓದಿಕೊಳ್ಳಬೇಕು.
ಮೀಸಲಾತಿ ವಿವರ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ತುರವನೂರು ರಸ್ತೆಯ ಬಸಪ್ಪ ಆಸ್ಪತ್ರೆ ಹತ್ತಿರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

