ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಿಳಾ ಸಬಲೀಕರಣಕ್ಕಾಗಿ ಜಾರಿಗೆ ತಂದ ನಮ್ಮ ಕಾಂಗ್ರೆಸ್ ಸರ್ಕಾರದ ‘ಶಕ್ತಿ‘ ಯೋಜನೆ ಇದೀಗ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‘ ಸೇರುವ ಮೂಲಕ ಇತಿಹಾಸ ನಿರ್ಮಿಸಿದೆ. ಕೇವಲ 2 ವರ್ಷಗಳಲ್ಲಿ 500 ಕೋಟಿಗೂ ಅಧಿಕ ಮಹಿಳೆಯರು ಉಚಿತ ಬಸ್ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಮಹತ್ತರ ಸಾಧನೆಗಾಗಿ ಶ್ರಮಿಸಿದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಅಧಿಕಾರಿಗಳು, ಸಿಬ್ಬಂದಿ ಹಾಗೂ ಯೋಜನೆಯ ಲಾಭ ಪಡೆದ ಪ್ರತಿಯೊಬ್ಬ ಮಹಿಳಾ ಪ್ರಯಾಣಿಕರಿಗೂ ಡಿಸಿಎಂ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
‘ಶಕ್ತಿ‘ ಕೇವಲ ಯೋಜನೆಯಲ್ಲ, ಇದು ಮಹಿಳೆಯರ ಸಬಲೀಕರಣ ಮತ್ತು ರಾಜ್ಯದ ಪ್ರಗತಿಯ ಸಂಕೇತ ಎಂದು ಡಿಸಿಎಂ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

