ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕಿನ ಕೊವೇರಟ್ಟಿ ಗ್ರಾಮದ ಮಾದಿಗ ಸಮಾಜದ ಡಿ.ತಿಪ್ಪೇಸ್ವಾಮಿ ಹಾಗೂ ಜ್ಯೋತಿ ದಂಪತಿಗಳ ಪುತ್ರಿ ವರ್ಷಿತಾ ಚಿತ್ರದುರ್ಗದಲ್ಲಿ ದ್ವಿತೀಯ ಪದವಿ ವ್ಯಾಸಂಗ ಮಾಡುತ್ತಿದ್ದು ಈ ಯುವತಿಯನ್ನು ಮನು ಕುಲವೇ ಬೆಚ್ಚಿ ಬೀಳುವ ರೀತಿಯಲ್ಲಿ ರೇಪ್ ಅಂಡ್ ಮರ್ಡರ್ ಮಾಡಿರುವುದು ನಿಜಕ್ಕೂ ದುರಂತದ ಸಂಗತಿಯಾಗಿದೆ ಎಂಬುದಾಗಿ ಮನವಿ ಟ್ರಸ್ಟ್ ಅಧ್ಯಕ್ಷೆ ಮಾನಸ ಮಂಜುನಾಥ್ ಸಂತಾಪ ಸೂಚಿಸಿದ್ದಾರೆ.
ವರ್ಷಿತಾಳಿಗೆ ಹಾಗೂ ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕಾದರೆ ಕೊಲೆಗಾರರ ವಿರುದ್ಧ ಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸಬೇಕು, ಈ ಕೊಲೆಗಾರರಿಗೆ ಕೊಡುವ ಶಿಕ್ಷೆ ಮುಂದೆ ಹೆಣ್ಣಿನ ಮೇಲೆ ದೌರ್ಜನ್ಯವೆಸಗದಂತೆ ಭಯ ಹುಟ್ಟಿಸುವಂತಿರಬೇಕು ಎಂದರಲ್ಲದೆ,
ಕುಮಾರಿ ವರ್ಷಿತಾ ಸಾವಿಗೆ ನ್ಯಾಯ ಸಿಗಬೇಕಾದರೆ, ಸಮಾಜದಲ್ಲಿ ಹೆಣ್ಣಿನ ಮೇಲೆ ಆಗುವ ದೌರ್ಜನ್ಯ ನಿಲ್ಲಬೇಕಾದರೆ ಸಮಾಜದ ಪ್ರತಿಯೊಬ್ಬರೂ ವರ್ಷಿತಾ ಸಾವಿಗೆ ನ್ಯಾಯ ದೊರಕಿಸಿಕೊಡಲು ಹೋರಾಟಕ್ಕೆ ಮುಂದಾಗಬೇಕು ಎಂಬುದಾಗಿ ಎಲ್ಲಾ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಲ್ಲಿ ಮಾನಸ ಮಂಜುನಾಥ್ ಮನವಿ ಮಾಡಿದ್ದಾರೆ.

