ಹಿರಿಯ ಮುತ್ಸದಿ ಮಾಜಿ ಶಾಸಕ ಆರ್.ರಾಮಯ್ಯ ಇನ್ನಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ವಿಧಾನಸಭಾ ಕ್ಷೇತ್ರದ ಹಿರಿಯ ಮುತ್ಸದಿ ರಾಜಕಾರಣಿ ಮಾಜಿ ಶಾಸಕ ಆರ್.ರಾಮಯ್ಯ(79)ರವರು ನಿಧನರಾಗಿದ್ದಾರೆ.

ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯ ಹಿರಿಯೂರು ತಾಲೂಕಿನ ಮಸ್ಕಲ್ ಗ್ರಾಮದ ತೋಟದಲ್ಲಿ ಗುರುವಾರ ಸಂಜೆ ನೆರವೇರಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.

- Advertisement - 

1985ರಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಅವರು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡು ಸಕ್ರಿಯ ರಾಜಕಾರಣದಲ್ಲಿ ತೊಡಗಿದ್ದರು.

ಗಣ್ಯರ ಸಂತಾಪ-ಕಾಂಗ್ರೆಸ್ ಮುಖಂಡ, ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ ಸೇರಿದಂತೆ ಮತ್ತಿತರ ಗಣ್ಯರು ಪುಷ್ಪನಮನ ಸಲ್ಲಿಸಿ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಅರ್ಪಿಸಿದರು.

- Advertisement - 

Share This Article
error: Content is protected !!
";