ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸೋರುತ್ತಿರುವ ಸರ್ಕಾರಿ ಶಾಲಾ ಕೊಠಡಿಗಳ ದುರಸ್ತಿಗೆ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಬೆಂಗಳೂರಿನಾದ್ಯಂತ ಮೃತ್ಯು ಕೂಪಗಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ. ಗುತ್ತಿಗೆದಾರರ ಬಿಲ್ ಪಾವತಿ ಮಾಡಲು ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ.
ಆದರೆ 2.5 ವರ್ಷಗಳ ಹಿಂದಷ್ಟೇ ಹತ್ತಾರು ಕೋಟಿ ಖರ್ಚು ಮಾಡಿ ನವೀಕರಣ ಮಾಡಲಾಗಿದ್ದ ಸಚಿವರ ಸರ್ಕಾರಿ ಬಂಗಲೆಗಳಲ್ಲಿ ಈಗ ಮತ್ತೊಮ್ಮೆ ನವೀಕರಣ ಮಾಡಲು ಮಾತ್ರ ದುಡ್ಡಿದೆ.
ನಾಚೀಯಾಗಬೇಕು ಈ ಲಜ್ಜೆಗೇಡಿ, ಲೂಟಿಕೋರ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಎಂದು ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.

