ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಗಳವರು ಶನಿವಾರ ಬೆಂಗಳೂರಿನ ನಮ್ಮ ನಿವಾಸಕ್ಕೆ ಆಗಮಿಸಿದ್ದರು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಒಳ ಮೀಸಲಾತಿ ಸೇರಿದಂತೆ, ಪ್ರಸ್ತುತ ವಿದ್ಯಮಾನಗಳ ಕುರಿತು ಸ್ವಾಮೀಜಿಗಳು ನನ್ನೊಂದಿಗೆ ಚರ್ಚಿಸಿದರು ಎಂದು ಸಚಿವರು ತಿಳಿಸಿದರು.

