ಸರ್ಕಾರಿ ಶಾಲಾ ಕಟ್ಟಡದ ಕಿಟಕಿ ಸಜ್ಜಾ ಕುಸಿದು ವಿದ್ಯಾರ್ಥಿಗಳಿಗೆ ಗಾಯ

News Desk

 ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಕಿಟಕಿಯ ಸಜ್ಜಾ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದರು.

ಮೂವರಲ್ಲಿ ಭುವನ್ ಎಂಬ ವಿದ್ಯಾರ್ಥಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ದರ್ಶನ್ ಎಸ್ ಎಂ. ಎಂಬ ವಿದ್ಯಾರ್ಥಿ ಹಾಸ್ಮಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement - 

ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ನಂತರ ವೈದ್ಯರೊಂದಿಗೆ ಚರ್ಚಿಸಿ ಸಂಪೂರ್ಣ ಮಾಹಿತಿ ಪಡೆದು ಸೂಕ್ತ ಚಿಕಿತ್ಸೆ ನೀಡಲು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು,ಸಚಿವರ ಆಪ್ತ ಕಾರ್ಯದರ್ಶಿ ಡಾ.ನಟರಾಜ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ ಪಿ.ವೈಧ್ಯಾದಿಕಾರಿ ದೀಪಕ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement - 

 

Share This Article
error: Content is protected !!
";