ಮಕ್ಕಳಲ್ಲಿ ಬೌದ್ಧಿಕ ಮನಸ್ಸು ಬೆಳೆಸುವುದು ಮುಖ್ಯ: ಡಾ.ರಾಮಕೃಷ್ಣೇಗೌಡ

News Desk

ಚಂದ್ರವಳ್ಳಿ ನ್ಯೂಸ್, ಧಾರವಾಡ:
ಬಿಜಿಎಸ್ ಎಜುಕೇಶನ್ ಸೆಂಟರ್‌ನ ಪ್ರತಿಯೊಂದು ಶಾಲೆಗಳಲ್ಲಿ ಮಕ್ಕಳಿಗೆ ಬೌದ್ಧಿಕ ಮನಸ್ಸು ಹೆಚ್ಚಿಸುವ ಕಾರ್ಯ ದಶಕಗಳಿಂದ ನಡೆಯುತ್ತಿದ್ದು, ಇದಕ್ಕೆ ಪಾಲಕರು ಸಾಕಷ್ಟು ಪ್ರೋತ್ಸಾಹ ನೀಡಿದ್ದಾರೆ ಎಂದು ಬಿಜಿಎಸ್ ಎಜುಕೇಶನ್ ಸೆಂಟರ್ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡರು ಹೇಳಿದರು.

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಧಾರವಾಡದ ಬಿಜಿಎಸ್ ಎಜುಕೇಶನ್ ಸೆಂಟರ್‌ನಲ್ಲಿ ನಡೆದ 52ನೇ ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ ಚಿಣ್ಣರ ಜಾಣರ ಜಗುಲಿ-2025 ಆಯೋಜನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

- Advertisement - 

ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣದ ಜೊತೆಗೆ ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದೆ. ಈ ಮೂಲಕ ಮಕ್ಕಳಲ್ಲಿ ಭಾರತೀಯ ಸಂಸ್ಕೃತಿಯ ಮೌಲ್ಯ ಮತ್ತು ನಾಯಕತ್ವ ಬರುತ್ತದೆ ಎಂದು ರಾಮಕೃಷ್ಣೇಗೌಡರು ಹೇಳಿದರು.

ಶಾಸಕ ಎನ್.ಎಚ್.ಕೋನರೆಡ್ಡಿ, ಗದಗದ ಶ್ರೀ ತೋಂಟದ ಸಿದ್ಧರಾಮ ಶ್ರೀಗಳು, ಹರಟೆ ವಾಗ್ಮಿ ನರಸಿಂಹ ಜ್ಯೋಶಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

- Advertisement - 

ನೂರಾರೂ ಮಕ್ಕಳು ತಮ್ಮ ಪಾಲಕರ ಪಾದ ಪೂಜೆ ಮಾಡುವ ಮೂಲಕ ವಿಶೇಷ ಕಾರ್ಯಕ್ರಮ ನಡೆಸಿಕೊಟ್ಟರು.

 

 

Share This Article
error: Content is protected !!
";