ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇದರ ಆಡಳಿತ ಮಂಡಳಿಗೆ ಚುನಾವಣೆ ಮೂಲಕ ಪದಾಧಿಕಾರಿಗಳ ಆಯ್ಕೆ ಮಾಡಲು ಹೊರಡಿಸಲಾಗಿದ್ದ ಚುನಾವಣಾ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ.
ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇದರ ಆಡಳಿತ ಮಂಡಳಿಯ ಅಧಿಕಾರ ಅವಧಿ ಸೆಪ್ಟೆಂಬರ್-29ಕ್ಕೆ ಮುಕ್ತಾಯವಾಗುತ್ತಿರುವ ಹಿನ್ನಲೆಯಲ್ಲಿ ಆಡಳಿತ ಮಂಡಳಿಗೆ ಚುನಾವಣೆಯನ್ನು ಸೆ.13ರಂದು ನಡೆಸಲು ಆಯೋಗದಿಂದ ಅನುಮತಿ ನೀಡಲಾಗಿತ್ತು. ಆದರೆ ಕೆಲ ಮತದಾರರು ನ್ಯಾಯಲಯಕ್ಕೆ ಪ್ರಕರಣವನ್ನು ಕೊಂಡೊಯ್ದರಿಂದಾಗಿ ಇನ್ನೂ ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥ ಆಗಿಲ್ಲದ ಕಾರಣ ಚುನಾವಣಾ ಅಧಿಸೂಚನೆ ಹಿಂಪಡೆಯಲಾಗಿದೆ.
ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಮತ್ತು ನಿಯಮಗಳು 1960 ರ ನಿಯಮ 14(1) ರಂತೆ ಚುನಾವಣೆಯ ಅಧಿಸೂಚನೆಯನ್ನು ಕಳೆದ ಜೂನ್-30ಕ್ಕೆ ಹೊರಡಿಸಲಾಗಿದ್ದು, ಕಾರಣಾಂತಗಳಿಂದ ಚುನಾವಣೆ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ತಿಳಿಸಿದ್ದಾರೆ.

