ಯಾವುದೇ ಜಾತಿ ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರದ ಆದೇಶಾನುಸಾರ ಕೈಗೊಂಡಿದೆ.

ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ದಿನಾಂಕ: 22.08.2025 ರಂದು ಪತ್ರಿಕೆಗಳಲ್ಲಿ ಪ್ರಕಟಣೆ ನೀಡಿ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆಗಳು ಇದ್ದಲ್ಲಿ, 07 ದಿನಗಳ ಒಳಗೆ ನೀಡಲು ಕೋರಲಾಗಿತ್ತು. 

- Advertisement - 

ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಅವಧಿಯನ್ನು ವಿಸ್ತರಿಸಲು ಕೋರಿರುವ ಕಾರಣ, ಬಗ್ಗೆ ಸಲಹೆ/ಸೂಚನೆ ಮನವಿಗಳನ್ನು ನೀಡುವ ಅವಧಿಯನ್ನು ದಿನಾಂಕ: 01.09.2025 ಸಂಜೆ 5.00 ಘಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಮೂಲಕ ಪ್ರಕಟಿಸಲಾಗಿದೆ. ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು.

ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು,ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ,ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶವಸಂತ ನಗರ,ಬೆಂಗಳೂರು ಅಥವಾ [email protected]  ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ.ಹೆಚ್ಚಿನವಿವರಗಳಿಗೆ ದೂ.ಸಂಖ್ಯೆ 080-29506668 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement - 

 

 

Share This Article
error: Content is protected !!
";