ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಶಿಶುವಿಗೆ ಜನ್ಮನೀಡಿದ್ದ ಪ್ರಕರಣದ ಎ1 ಆರೋಪಿ ಬಂಧನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಯಾದಗಿರಿ:
ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ಶಹಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿ. ಶಹಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹಾಸ್ಟೆಲ್ ವಾರ್ಡನ್ ಸೇರಿ ಐವರ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿತ್ತು. ಪ್ರಕರಣ ದಾಖಲಾದಾಗ ಎ1 ಆರೋಪಿ ಸ್ಥಾನ ಖಾಲಿ ಇಡಲಾಗಿತ್ತು. ಈಗ ಪರಮಣ್ಣನನ್ನು ಬಂಧಿಸಿ ಪೊಲೀಸರು ಎ1 ಆರೋಪಿ ಮಾಡಿದ್ದಾರೆ.

- Advertisement - 

ಬಂಧಿತ ಆರೋಪಿ ಪರಮಣ್ಣ, ಅಪ್ರಾಪ್ತ ಬಾಲಕಿ ಜೊತೆ ಸಂಬಂಧ ಬೆಳೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಏನಿದು ಘಟನೆ-
ವಸತಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲಿ ಚಿರಾಡುವ ಶಬ್ದ ಕೇಳಿ ಬಂದಿತ್ತು. ವಸತಿಯ ಇತರೆ ಮಕ್ಕಳು ಪರಿಶೀಲಿಸಿದಾಗ ವಿದ್ಯಾರ್ಥಿನಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ದೃಶ್ಯ ಕಂಡುಬಂದಿತ್ತು.

- Advertisement - 

ಕೂಡಲೇ ಸಹಪಾಠಿ ವಿದ್ಯಾರ್ಥಿನಿಯರು ಬಾಲಕಿಗೆ ಹೆರಿಗೆ ಮಾಡಿಸಿದ್ದರು. ಬಳಿಕ ವಸತಿ ಶಾಲೆಯ ಪ್ರಾಂಶುಪಾಲರು, ವಾರ್ಡನ್ ಹಾಗೂ ಸ್ಟಾಪ್‌ನರ್ಸ್​ಗೆ ವಿಷಯ ತಿಳಿದ ಕೂಡಲೇ ವಿದ್ಯಾರ್ಥಿನಿ ತಾಯಿಗೆ ವಿಷಯ ತಿಳಿಸಲಾಗಿತ್ತು.
ನವಜಾತ ಶಿಶುವನ್ನು ಶಹಾಪುರ ಸರ್ಕಾರಿ ತಾಲೂಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆಸ್ಪತ್ರೆಗೆ ದಾಖಲು ಮಾಡಿದ ಕೂಡಲೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಮಾಹಿತಿ ಸಿಕ್ಕಿದೆ. ಆಯೋಗ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡು ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿತ್ತು.

 ವಸತಿ ಶಾಲೆಯ ಶೌಚಾಲಯದಲ್ಲಿ ಹೆರಿಗೆ ಆದರೂ ಪ್ರಾಂಶುಪಾಲರಿಗೆ, ವಾರ್ಡನ್ ಹಾಗೂ ಸ್ಟಾಪ್‌ನರ್ಸ್​ಗೆ ಮಾಹಿತಿ ಇಲ್ಲದ ಕಾರಣಕ್ಕೆ ಮೂವರ ಮೇಲೆ‌ಕೇಸ್ ದಾಖಲು ಮಾಡಿ ಅಮಾನತ್ತು ಮಾಡಲಾಗಿತ್ತು.
ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ವಿದ್ಯಾರ್ಥಿನಿಯ ಸಹೋದರನ ಮೇಲೂ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

 

Share This Article
error: Content is protected !!
";