ಪರಸ್ಪರ ನಂಬಿಕೆ, ಸೂಕ್ಷ್ಮತೆಯ ಆಧಾರದ ಮೇಲೆ ಚೀನಾದೊಂದಿಗೆ ಸಂಬಂಧ-ಮೋದಿ

News Desk

ಚಂದ್ರವಳ್ಳಿ ನ್ಯೂಸ್, ಬೀಜಿಂಗ್:
ಪರಸ್ಪರ ನಂಬಿಕೆ
, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ಚೀನಾದೊಂದಿಗಿನ ಸಂಬಂಧಗಳ ಬಲಪಡಿಸುವ ಭಾರತದ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದರು.

ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಮೋದಿ ಅವರು ಈ ಸಂದೇಶ ನೀಡಿದರು.

- Advertisement - 

ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ನಮ್ಮ ಸಂಬಂಧಗಳನ್ನು ಮುನ್ನಡೆಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ. ಭಾರತ ಮತ್ತು ಚೀನಾ ನಡುವಿನ ಸಹಕಾರವು ಉಭಯ ರಾಷ್ಟ್ರಗಳಿಗೆ ಮಾತ್ರವಲ್ಲದೆ 2.8 ಶತಕೋಟಿ ಜನರ ಕಲ್ಯಾಣಕ್ಕೂ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಅವರು ಒತ್ತಿ ಹೇಳಿದರು.

ಭಯೋತ್ಪಾದನೆಯ ವಿಷಯ ದೃಢವಾಗಿ ಪ್ರಸ್ತಾಪಿಸಿದ ಪ್ರಧಾನಿ, ಅದನ್ನು ಜಾಗತಿಕ ಪಿಡುಗು ಎಂದು ಬಣ್ಣಿಸಿ, ಈ ಬೆದರಿಕೆ ಎದುರಿಸುವಲ್ಲಿ ಚೀನಾ ಒಟ್ಟಾಗಿ ಕೆಲಸ ಮಾಡುವಂತೆ ಮೋದಿ ಅವರು ಒತ್ತಾಯಿಸಿದರು.

- Advertisement - 

ಇತ್ತೀಚೆಗೆ ವಿವಾದಿತ ಗಡಿಯಲ್ಲಿ ಸೈನ್ಯವನ್ನು ವಾಪಸ್ ಕರೆಸಿಕೊಂಡಿರುವುದು ಶಾಂತಿ ಮತ್ತು ಸ್ಥಿರತೆಯ ವಾತಾವರಣವನ್ನು ಸೃಷ್ಟಿಸಲು ಸಹಾಯ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮೋದಿ ಅವರ ಎರಡು ದಿನಗಳ ಭೇಟಿಯು ಏಳು ವರ್ಷಗಳ ನಂತರ ಚೀನಾಕ್ಕೆ ಅವರ ಮೊದಲ ಭೇಟಿ ನೀಡುತ್ತಿರುವುದು ವಿಶೇಷವಾಗಿದೆ.

2026ರಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರನ್ನು ಆಹ್ವಾನಿಸಿದ್ದಾರೆ.

ಭಾರತ ಮತ್ತು ಚೀನಾ ಪ್ರತಿಸ್ಪರ್ಧಿಗಳಲ್ಲ ಅಭಿವೃದ್ಧಿ ಪಾಲುದಾರರು ಎಂದು ಪ್ರಧಾನಿ ಮೋದಿ ಮತ್ತು ಷಿ ಪುನರುಚ್ಚರಿಸಿದ್ದಾರೆ .ಭಾರತ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ನೇರ ವಿಮಾನಗಳ ಪುನರಾರಂಭ ಮತ್ತು ಕೈಲಾಸ ಮಾನಸ ಸರೋವರ ಯಾತ್ರೆ ನಿರ್ಣಾಯಕವಾಗಿದೆ ಎನ್ನಲಾಗುತ್ತಿದೆ.

 

Share This Article
error: Content is protected !!
";