ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸನ ಜಿಲ್ಲೆಯ ಕಂದಲಿ ಗ್ರಾಮದಲ್ಲಿ #ಧರ್ಮಸ್ಥಳ ಸತ್ಯ ಯಾತ್ರೆಗೆ ಚಾಲನೆ ನೀಡಲಾಯಿತು.
ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಹಾಗೂ ಶ್ರೀ ಅಣ್ಣಪ್ಪ ಸ್ವಾಮಿ ಅವರ ಆಶೀರ್ವಾದ ಪಡೆದು, ಧರ್ಮಸ್ಥಳ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸುವಂತೆ ಆಗ್ರಹಿಸೋಣ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಧರ್ಮಸ್ಥಳ ಸತ್ಯ ಯಾತ್ರೆಗೆ ಆಗಮಿಸುತ್ತಿರುವ ಕಾರ್ಯಕರ್ತರಲ್ಲಿ ನನ್ನ ಮನವಿ ಶ್ರೀಕ್ಷೇತ್ರ ಧರ್ಮಸ್ಥಳದ ಸತ್ಯ ಯಾತ್ರೆಗೆ ಈಗಾಗಲೇ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ತಮ್ಮ ಕಾರುಗಳಲ್ಲಿ, ಬಸ್ ಹಾಗೂ ಟಿ.ಟಿ ಗಳ ಮೂಲಕ ಆಗಮಿಸುತ್ತಿರುವ ಸುದ್ದಿ ತಿಳಿದು ಸಂತಸವಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ತಾವೆಲ್ಲರೂ ಸಂಚಾರ ನಿಯಮಗಳನ್ನು ಪಾಲಿಸುವುದರ ಜೊತೆಗೆ ಅತೀ ವೇಗದ ಚಾಲನೆ ಮಾಡದೆ, ಓವರ್ ಟೆಕ್ ಮಾಡದೆ ಸಮಾಧಾನದಿಂದ ಸುರಕ್ಷಿತವಾಗಿ , ಕ್ಷೇಮವಾಗಿ ಆಗಮಿಸಬೇಕಾಗಿ ನಿಖಿಲ್ ಅವರು ವಿನಂತಿಸಿದ್ದಾರೆ.

