![](https://www.chandravallinews.com/wp-content/uploads/2024/06/Acci-3.jpg)
i
ಕಾರು ಅಪಘಾತ: ಓರ್ವ ಸಾವು
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ಹೊಸನಗರ ತಾಲ್ಲೂಕು ಯಡೂರು ಸಮೀಪ ನಿನ್ನೆ ಅಪಘಾತವೊಂದು ಸಂಭವಿಸಿದೆ. ಯಡೂರು ಸಮೀಪ ಮತ್ತಿಗ ಎಂಬ ಗ್ರಾಮದ ಬಳಿಯಲ್ಲಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಕಾರೊಂದು ಅಪ್ಸೆಟ್ಆಗಿ ಓರ್ವ ಸಾವನ್ನಪ್ಪಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ. ಅತಿಶಯ (23) ವರ್ಷ ಮೃತಪಟ್ಟ ಯುವಕ.
ತೀರ್ಥಹಳ್ಳಿಯಿಂದ ಐವರು ಕಾರಿನಲ್ಲಿ ತೆರಳಿ ಮೀನು ಹಿಡಿಯಲು ಹೋಗಿದ್ದರು. ಮೀನು ಹಿಡಿದು ವಾಪಸ್ಬರುವಾಗ ಕಾರು ಪಲ್ಟಿಯಾಗಿದೆ. ಪರಿಣಾಮ ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿ ಆಗದೇ ಓರ್ವ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.