![](https://www.chandravallinews.com/wp-content/uploads/2024/06/Money-2-6.jpeg)
i
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ
ಚಂದ್ರವಳ್ಳಿ ನ್ಯೂಸ್, ತುಮಕೂರು:
ಕೊರಟಗೆರೆ ತಾಲ್ಲೂಕು ತೋಟಗಾರಿಕೆ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ರೈತರು ಹಾಗೂ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಹಣ್ಣಿನ ಬೆಳೆಗಳಾದ ಅಂಗಾಂಶ ಮತ್ತು ಕಂದು ಬಾಳೆ/ ಪೈನಾಪಲ್; ಹೂವಿನ ಬೆಳೆಗಳಾದ ಸುಗಂಧರಾಜ/ ಚೆಂಡು ಹೂ/ ಸೇವಂತಿಗೆ ಹೂವು; ಹೈಬ್ರಿಡ್ ತರಕಾರಿ ಬೆಳೆ; ಕಾಳು ಮೆಣಸು ಬೆಳೆ ಹೊಸ ಪ್ರದೇಶ ವಿಸ್ತರಣೆ, ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು. ಅಲ್ಲದೆ ಯಾಂತ್ರೀಕರಣ ಘಟಕದಡಿ ೨೦ ಹೆಚ್.ಪಿ.ಗಿಂತ ಕಡಿಮೆ ಸಾಮರ್ಥ್ಯದ ಟ್ರಾಕ್ಟರ್ ಖರೀದಿ ಮತ್ತು ಕೊಯ್ಲೋತ್ತರ ನಿರ್ವಹಣೆ, ಪ್ಯಾಕ್ಹೌಸ್, ಪ್ರಾಥಮಿಕ ಸಂಸ್ಕರಣಾ ಘಟಕ, ಶೀತಲ ವಾಹನ, ಕಡಿಮೆ ವೆಚ್ಚದ ಈರುಳ್ಳಿ ಶೇಖರಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು. ಆಸಕ್ತ ರೈತರು ಹಾಗೂ ಉದ್ದಿಮೆದಾರರು ತಮ್ಮ ಅರ್ಜಿಯೊಂದಿಗೆ ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಮತ್ತಿತರ ದಾಖಲಾತಿಗಳೊಂದಿಗೆ ಜುಲೈ ೧೫ರೊಳಗಾಗಿ ಕೊರಟಗೆರೆ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.