ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಸಮತೋಲಿತ ಆಹಾರದ ಮೌಲ್ಯ ಕುರಿತು ಜಾಗೃತಿ ಮೂಡಿಸುವ ಗುರಿ ಮತ್ತು ವಿಶ್ವ ಆಹಾರ ದಿನದ ಅಂಗವಾಗಿ ಪೌಷ್ಟಿಕ ಆಹಾರ ಸೇವನೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಪೌಷ್ಟಿಕ ಅಧಿಕಾರಿ ಸಣ್ಣ ರಂಗಮ್ಮ ತಿಳಿಸಿದರು.
ಹಿರಿಯೂರು ಯುಪಿಎಸ್ಸಿಗೆ ಸೇರಿರುವ ಗೋಪಾಲಪುರ ಮತ್ತು ನೆಹರು ಮೈದಾನದ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಪೌಷ್ಟಿಕ ದಿನಾಚರಣೆ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.
ಜಾಗತಿಕ ಹಸಿವು ಮತ್ತು ಅಪೌಷ್ಟಿಕತೆಯ ಸಮಸ್ಯೆ ಎತ್ತಿ ತೋರಿಸುತ್ತದೆ. ಸಮತೋಲಿತ ಆಹಾರ ಮತ್ತು ಉತ್ತಮ ಪೋಷಣೆಯ ಅಭ್ಯಾಸಗಳ ಮಹತ್ವದ ಬಗ್ಗೆ ಮಹಿಳೆಯರು, ಗರ್ಭಿಣಿಯರು, ವಿಶೇಷವಾಗಿ ವಿದ್ಯಾರ್ಥಿಗಳಿಗೆ ಅರಿವು ನೀಡಲಾಗುವುದು. ಆರೋಗ್ಯಕರ ಜೀವನಶೈಲಿಗೆ ಪೌಷ್ಟಿಕ ಆಹಾರದ ಅಗತ್ಯದ ಬಗ್ಗೆ ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶ ಎಂದು ಅವರು ತಿಳಿಸಿದರು.
ಚಿಕ್ಕ ವಯಸ್ಸಿನಿಂದಲೇ ಸರಿಯಾದ ಆಹಾರ ಸೇವನೆ ಮಾಡುವುದು ಆರೋಗ್ಯಕರ ದೇಹ, ತೀಕ್ಷ್ಣ ಮನಸ್ಸು ಮತ್ತು ಒಟ್ಟಾರೆ ಯೋಗಕ್ಷೇಮಕ್ಕೆ ಸಹಕಾರಿ ಎಂಬುದನ್ನು ತಿಳಿಯಬೇಕು ಎಂದು ಸಣ್ಣರಂಗಮ್ಮ ಕಿವಿ ಮಾತು ಹೇಳಿದರು. ಜಾಗತಿಕ ಮಟ್ಟದಲ್ಲಿ ಹಸಿವು ಮತ್ತು ಅಪೌಷ್ಟಿಕತೆಯ ಸಮಸ್ಯೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು. ಆಹಾರದ ಲಭ್ಯತೆಯಲ್ಲಿನ ಅಸಮಾನತೆಗಳನ್ನು ಎತ್ತಿ ತೋರಿಸಿ, ಆ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ಕೆಲಸ ಮಾಡುವಂತೆ ಪ್ರೋತ್ಸಾಹಿಸುವುದು ಇದರ ಗುರಿಯಾಗಿದೆ ಎಂದು ಹೇಳಿದರು.
ಲಕ್ಷಾಂತರ ಜನರು ಹಸಿವಿನಿಂದ ಬಳಲುತ್ತಿದ್ದಾರೆ. ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯಕರ ಸದೃಢ ದೇಹ ಮತ್ತು ಮನಸ್ಸಿಗೆ ಪೌಷ್ಟಿಕಾಂಶಯುತ ಆಹಾರ ಅತ್ಯಗತ್ಯ. ಆರೋಗ್ಯಕರ ಜೀವನಶೈಲಿ ನಡೆಸಲು ಆರೋಗ್ಯಕರ ಆಹಾರ ಪದ್ಧತಿ ಮತ್ತು ಸರಿಯಾದ ಪೋಷಣೆ ಅಗತ್ಯವಾಗಿ ಎಂದು ಜಿಲ್ಲಾ ಪೌಷ್ಟಿಕ ಅಧಿಕಾರಿ ತಿಳಿಸಿದರು.
ಸಭೆಗೆ ಗರ್ಭಿಣಿಯರು, ಬಾಣಂತಿಯರು, ಕಿಶೋರಿಯರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆಯರಾದ ಉಷಾ, ಸುಂದರಮ್ಮ, ಆಶಾ ಕಾರ್ಯಕರ್ತೆಯರಾದ ಗಾಯಿತ್ರಿ, ರೂಪಾ, ಆರೋಗ್ಯ ಸಹಾಯಕಿ ಇಂದಿರಮ್ಮ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

