ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಲಮಂಡಳಿಯಲ್ಲಿ ಕೆಲಸ ಮಾಡುವ ಕಾರ್ಮಿಕರ ಕ್ಷೇಮವನ್ನು ಕಾಪಾಡಲು ನಮ್ಮ ಸರ್ಕಾರ ಬದ್ಧವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಬೆಂಗಳೂರು ಜಲಮಂಡಳಿಯಲ್ಲಿ ಕೆಲಸ ಮಾಡುವ 700ಕ್ಕೂ ಹೆಚ್ಚು ಮಂದಿ ಕಾರ್ಮಿಕರಿಗೆ ರಾಜ್ಯ ಸರ್ಕಾರದ ‘ಅನ್ನಪೂರ್ಣ ಯೋಜನೆ‘ಯಡಿ ಬೆಳಗಿನ ಉಪಾಹಾರ ಭತ್ಯೆಯನ್ನು ನೀಡಲಾಗುತ್ತಿದೆ. ಪ್ರತಿ ಕಾರ್ಮಿಕರ ಖಾತೆಗೆ ತಿಂಗಳಿಗೆ ಉಪಾಹಾರ ಭತ್ಯೆಯಾಗಿ 1,500 ರೂ. ಜಮಾ ಆಗಲಿದೆ ಎಂದು ಡಿಸಿಎಂ ತಿಳಿಸಿದರು.
ನಮ್ಮ ಜಲಮಂಡಳಿ ಸ್ವಚ್ಛತಾ ಕಾರ್ಮಿಕರಿಗೆ ಹೊಸ ಗೌರವ ಮತ್ತು ಆರ್ಥಿಕ ಭದ್ರತೆಯನ್ನು ನೀಡುವ ಉದ್ದೇಶದಿಂದ ಇಂದು ಬೆಂಗಳೂರಿನ ರಜತ ಭವನದಲ್ಲಿ ‘ಅನ್ನಪೂರ್ಣ ಯೋಜನೆ‘ ಅಡಿ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸಿದರು.
ಈ ಯೋಜನೆಯಡಿಯಲ್ಲಿ, 700ಕ್ಕೂ ಹೆಚ್ಚು ಸ್ವಚ್ಛತಾ ಕಾರ್ಮಿಕರಿಗೆ ಪ್ರತಿದಿನ 50ರಂತೆ ಮಾಸಿಕ 1,500 ಅನ್ನು ಸ್ಮಾರ್ಟ್ ಕಾರ್ಡ್ ಮೂಲಕ ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗುವುದು. ಇದು ದೇಶದಲ್ಲಿಯೇ ತಂತ್ರಜ್ಞಾನ ಆಧಾರಿತ ನೇರ ಹಣ ವರ್ಗಾವಣೆಯ ಮೊದಲ ಪ್ರಯತ್ನವಾಗಿದ್ದು, ಇದು ಮಾನವೀಯತೆಯೊಂದಿಗೆ ಪ್ರಗತಿಯತ್ತ ಸಾಗುತ್ತಿರುವ ನಮ್ಮ ಬೆಂಗಳೂರನ್ನು ಪ್ರತಿಬಿಂಬಿಸುತ್ತದೆ ಎಂದು ಶಿವಕುಮಾರ್ ಹೇಳಿದರು.

