ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಸಕ್ತ ಸಾಲಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗಳಿಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಜಮೀನು ಹೊಂದಿರುವ ಆಸಕ್ತ ಕೃಷಿ ಮತ್ತು ಕೃಷಿ ಸಂಬಂಧಿಸಿದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ರೈತರು ಹಾಗೂ ರೈತ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಈ ಹಿಂದೆ ಜಿಲ್ಲಾಮಟ್ಟ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದವರು ಸ್ಪರ್ಧಿಸುವಂತಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸೇವೆಯಲ್ಲಿರಬಾರದು. ವಿಶ್ವವಿದ್ಯಾಲಯ, ಸರ್ಕಾರಿ ಸ್ವಯಂ ಸಂಸ್ಥೆಗಳ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ಕೃಷಿ ಮತ್ತು ಸಂಬಂಧಿತ ಇಲಾಖೆಗಳ ನಿವೃತ್ತ ತಾಂತ್ರಿಕ ನೌಕರರು ಮತ್ತು ಕುಟುಂಬದವರು ಭಾಗವಹಿಸುವಂತಿಲ್ಲ.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿಗಾಗಿ ಸಂಬಂಧಪಟ್ಟ ರೈತರ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

