ಕಾಂಗ್ರೆಸ್ ಪಕ್ಷ ಮೋಸ ಮಾಡಿಲ್ಲ. ಪಕ್ಷ ಬಿಡಲ್ಲ-ಕೆ.ಎನ್.ರಾಜಣ್ಣ

News Desk

 ಚಂದ್ರವಳ್ಳಿ ನ್ಯೂಸ್, ತುಮಕೂರು:
ಬಿಜೆಪಿ ಸೇರ್ಪಡೆಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಅರ್ಜಿ ಹಾಕಿದ್ದಾರೆ. ಅವರು ಹೋಗುವ ಮುನ್ನ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ರಾಜಣ್ಣ ಅವರನ್ನು ಬಿಜೆಪಿ ನಾಯಕರೇ ಸ್ವಾಗತಿಸುತ್ತಿದ್ದಾರೆ ಸ್ವಪಕ್ಷದ ಶಾಸಕ ಎಚ್.ಸಿ.ಬಾಲಕೃಷ್ಣ ಗಂಭೀರ ಆರೋಪ ಮಾಡಿದ್ದರು.

ಈಗಾಗಲೇ ಒಂದು ಕಾಲು ಬಿಜೆಪಿಯಲ್ಲಿ ಇಟ್ಟಿರುವ ಅವರು, ನೂರಕ್ಕೆ ನೂರು ಬಿಜೆಪಿ ಸೇರ್ಪಡೆ ಆಗುತ್ತಾರೆ. ನಮ್ಮ ಸರ್ಕಾರ ಇಲ್ಲದೆ ಹೋಗಿದ್ದರೆ ಇಷ್ಟೊತ್ತಿಗಾಗಲೇ ಅವರು ಬಿಜೆಪಿ ಸೇರ್ಪಡೆ ಆಗಿರುತ್ತಿದ್ದರು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಆರೋಪಿಸಿದ್ದರು.

- Advertisement - 

ಈ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಮೂಡಿಸಿದೆ. ಶಾಸಕ ಬಾಲಕೃಷ್ಣ ಅವರ ಹೇಳಿಕೆಗೆ ಖುದ್ದು ರಾಜಣ್ಣ ಅವರೇ ಪ್ರತಿಕ್ರಿಯಿಸಿದ್ದಾರೆ.
ನನಗೆ ಕಾಂಗ್ರೆಸ್ ಪಕ್ಷ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಕೆ.ಎನ್.ರಾಜಣ್ಣ ಅವರು ಸ್ಪಷ್ಟಪಡಿಸಿದರು.

ತುಮಕೂರಿನಲ್ಲಿ ಕೆ.ಎನ್.ರಾಜಣ್ಣ ಮಾತನಾಡಿ, ನಾನು ಬಿಜೆಪಿಗೆ ಹೋಗುತ್ತೇನೆ ಎಂದು ಯಾವನು ಹೇಳಿದ್ದು? ಬಾಲಕೃಷ್ಣ ಹೇಳೋದು ಹೇಳಿಕೊಳ್ಳಲಿ . ಅವನು ಬೇಕಾದರೆ ಬ್ರೈನ್ ಮ್ಯಾಪಿಂಗ್ ಮಾಡಿಕೊಳ್ಳಲಿ ಎಂದು ಬಾಲಕೃಷ್ಣ ವಿರುದ್ಧ ಏಕವಚನದಲ್ಲೇ ಅವರು ವಾಗ್ದಾಳಿ ನಡೆಸಿದರು.

- Advertisement - 

 

Share This Article
error: Content is protected !!
";