ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿವಿಧ ಸರಕು ಮತ್ತು ಸೇವೆಗಳ ಮೇಲೆ ಜಿಎಸ್‍ಟಿ ಇಳಿಕೆ ಮಾಡುವ ಮೂಲಕ ಜನ ಸಾಮಾನ್ಯರಿಗೆ ದಸರಾ-ದೀಪಾವಳಿ ಬಂಪರ್ ಗಿಫ್ಟ್ ನೀಡಿದ ಮೋದಿ ಸರ್ಕಾರ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹರ್ಷ ವ್ಯಕ್ತಪಡಿಸಿದ್ದಾರೆ.
ದಿನಬಳಕೆ ವಸ್ತುಗಳು, ಆರೋಗ್ಯ, ವಾಹನ, ವೈಯುಕ್ತಿಕ ವಿಮೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಜಿಎಸ್‍ಟಿ ಕಡಿತಗೊಳಿಸುವ ಮೂಲಕ ಪ್ರಧಾನಿ ಮೋದಿ ಸರ್ಕಾರವು ಜನಸಾಮಾನ್ಯರಿಗೆ ಬಂಪರ್ ಕೊಡುಗೆ ನೀಡಿದೆ.
ಜಿಎಸ್‌ಟಿ ದರ ಕಡಿತ ಮತ್ತು ಪ್ರಕ್ರಿಯೆ ಸುಧಾರಣೆಗಳ ಈ ಐತಿಹಾಸಿಕ ನಿರ್ಧಾರವು ಬಡವರು ಮತ್ತು ಮಧ್ಯಮ ವರ್ಗಕ್ಕೆ ಭಾರಿ ಅನುಕೂಲವಾಗಲಿದ್ದು, ಆರ್ಥಿಕತೆಗೆ ಹೊಸ ಚೈತನ್ಯ ತುಂಬಲಿದೆ.
ಔಷಧಗಳು, ಆರೋಗ್ಯಪರಿಕರಗಳು, ವೈಯುಕ್ತಿಕ ಆರೋಗ್ಯ ವಿಮೆಗಳ ಮೇಲಿನ ಜಿಎಸ್‍ಟಿ ದರವನ್ನು 18% ದಿಂದ ಕೇವಲ 5% ಗೆ ಇಳಿಕೆ ಮಾಡಲಾಗಿದ್ದು, ಸರ್ಕಾರ ಜನಸಾಮಾನ್ಯರ ಬೇಡಿಕೆಗೆ ಸ್ಪಂದಿಸದೆ.
ಈ ಐತಿಹಾಸಿಕ ಜಿಎಸ್ಟಿ ಸುಧಾರಣೆಗಳು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಜನಕೇಂದ್ರಿತ, ಜನಸ್ನೇಹಿ ಆಡಳಿತಕ್ಕೆ ಮತ್ತೊಂದು ನಿದರ್ಶನವಾಗಿದೆ ಎಂದು ಅಶೋಕ್ ತಿಳಿಸಿದರು.

