ಜಿಎಸ್ ಟಿ ಕಡಿತ ಮಾಡಿ ಜನರಿಗೆ ದಸರಾ ಉಡುಗೊರೆ ನೀಡಿದ ಮೋದಿ

News Desk

 

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ, ಜಿಎಸ್‌ಟಿಯಲ್ಲಿ ಮುಂದಿನ ಪೀಳಿಗೆಯ ಸುಧಾರಣೆಗಳನ್ನು ತರುವ ಬಗ್ಗೆ ದೇಶಕ್ಕೆ ಹೇಳಿದಂತೆ ಜಿಎಸ್ ಟಿ ಕಡಿತ ಮಾಡುವ ಮೂಲಕ ದೇಶದ ಜನರಿಗೆ ದಸರಾ ಉಡುಗೊರೆ ನೀಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ.

- Advertisement - 

ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ @GST_Council, ಕೇಂದ್ರ ಸರ್ಕಾರವು ಸಲ್ಲಿಸಿದ ಜಿಎಸ್‌ಟಿ ಕಡಿತ ಮತ್ತು ಸುಧಾರಣೆಗಳ ಪ್ರಸ್ತಾವನೆಗಳನ್ನು ಸರ್ವಾನುಮತದಿಂದ ಅನುಮೋದಿಸಿದ್ದು,ಇದು ಸಾಮಾನ್ಯ ಜನರು, ರೈತರು, ಎಂಎಸ್‌ಎಂಇಗಳು, ಮಧ್ಯಮ ವರ್ಗ, ಮಹಿಳೆಯರು ಮತ್ತು ಯುವಕರಿಗೆ ಪ್ರಯೋಜನವನ್ನು ನೀಡಲಿದೆ.

ಹೇರ್ ಆಯಿಲ್ ನಿಂದ ಕಾರ್ನ್ ಪ್ಲೇಕ್ಸ್ , ಟಿ.ವಿ ಸೆಟ್ಆರೋಗ್ಯ ಮತ್ತು ಜೀವ ವಿಮೆ ಪಾಲಿಸಿ ವರೆಗೆ ಜನಸಾಮಾನ್ಯರು ಬಳಸುವ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ ( ಜಿಎಸ್ ಟಿ) ದರಗಳು ಕಡಿಮೆ ಆಗಲಿವೆ.

- Advertisement - 

ದೇಶದ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಮೂಲಕ ಜನಸಾಮಾನ್ಯರ ಪ್ರಧಾನಿ ಎಂಬುದನ್ನು ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ರಾಜ್ಯದ ಜನರು ಜಿಎಸ್ ಟಿ ಕಡಿತದ ಲಾಭ ಪಡೆಯಲು ವಿನಂತಿಸುತ್ತೇನೆ ಎಂದು ನಿಖಿಲ್ ತಿಳಿಸಿದ್ದಾರೆ.

Share This Article
error: Content is protected !!
";