ಸಿದ್ದರಾಮಯ್ಯ ಅವರೊಂದಿಗೆ ಬಾಗಿನ ಸಮರ್ಪಣೆ ಮಾಡಿದ ಡಿಕೆ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅನಂತವಾಗಲಿ ಆಲಮಟ್ಟಿ ಜಲಾಶಯದಲ್ಲಿನ ಜಲ ಸಂಪತ್ತು! ಸಿದ್ದರಾಮಯ್ಯ ಅವರೊಂದಿಗೆ ಗಂಗಾಪೂಜೆ-ಬಾಗಿನ ಸಮರ್ಪಣೆ ಮಾಡಲಾಯಿತು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ನಿಡಗುಂದಿ: ಕನ್ನಡ ನಾಡಿನ ಹೆಮ್ಮೆಯ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಲ್ಲಿ  ಗರಿಷ್ಠಮಟ್ಟದ ನೀರು ಸಂಗ್ರಹಣೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕೃಷ್ಣೆಯ ಜಲಧಿಗೆ ಗಂಗಾಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸುವ ಕಾರ್ಯವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ನೆರವೇರಿಸಲಾಯಿತು ಎಂದು ಪಾಟೀಲ್ ಹೇಳಿದರು.

- Advertisement - 

ಈ ವೇಳೆ ನಾಡಿನ ಸರ್ವಜನರ ಸುಖ, ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಜನಪ್ರತಿನಿಧಿಗಳು, ಅಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಈ ಸಾಂಪ್ರದಾಯಿಕ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು. ಸುಜಲಾ-ಸುಫಲಾ’: ಕರ್ನಾಟಕದ ಕನಸನ್ನು ಆಲಮಟ್ಟಿ ಮತ್ತಷ್ಟು ಅರಳಿಸಲಿ ಎಂದು ಸಚಿವರು ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";