ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಐತಿಹಾಸಿಕ ಚಿತ್ರದುರ್ಗ ನಗರದಲ್ಲಿ ಧಾರ್ಮಿಕ ಶ್ರದ್ಧೆಯ ಜೊತೆಗೆ ಸಾಂಸ್ಕೃತಿಕ ವೈಭವವನ್ನು ಪ್ರತಿನಿಧಿಸುವ ಮೂಲಕ ಇಡೀ ರಾಜ್ಯದ ಜನರ ಗಮನ ಸೆಳೆಯುವ ವಿಶ್ವ ಹಿಂದೂ ಪರಿಷತ್ ಬಜರಂಗದಳ ನೇತೃತ್ವದಲ್ಲಿ ಪ್ರತಿಷ್ಠಾಪಿಸಿರುವ ವಿಶ್ವ ಹಿಂದೂ ಮಹಾ ಗಣಪತಿಯ ದರ್ಶನ ಪಡೆಯಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಗಣಪತಿ ಉತ್ಸವ ಸಡಗರದ ಸಂಕೇತವಷ್ಟೇ ಅಲ್ಲ, ಧರ್ಮಜಾಗೃತಿಯ ಉತ್ಸವವೂ ಹೌದು ಎಂಬುದನ್ನು ಕೋಟೆ ನಾಡಿನ ಐತಿಹಾಸಿಕ ಗಣಪತಿ ಉತ್ಸವ ಪ್ರತಿ ವರ್ಷವೂ ಸಾಕ್ಷೀಕರಿಸುತ್ತಿದೆ ಎಂದು ವಿಜಯೇಂದ್ರ ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಮುಖಂಡ ಲಿಂಗಮೂರ್ತಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

