ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯ ಅಲ್ಪಸಂಖ್ಯಾತರ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಬೌದ್ದ ಮತ್ತು ಸಿಖ್ ವರ್ಗದ ಕಾನೂನು ಪದವೀಧರರಿಗೆ ಶಿಷ್ಯ ವೇತನ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆ.15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿಗಳನ್ನು ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 01 ನೇ ಮಹಡಿ ಶ್ರೀರಾಮ ಕಾಂಪ್ಲೆಕ್ಸ್, ಸ್ಟೇಡಿಯಂ ರಸ್ತೆ, ಚಿತ್ರದುರ್ಗ ಇಲ್ಲಿ ಕಛೇರಿ ವೇಳೆಯಲ್ಲಿ ಅರ್ಜಿ ನಮೂನೆಗಳನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ಅಭ್ಯರ್ಥಿಯು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ,ಬೌದ್ದ ಮತ್ತು ಸಿಖ್ ಸಮುದಾಯದಕ್ಕೆ ಸೇರಿದ್ದು, ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕಕ್ಕೆ 2 ವರ್ಷದ ಒಳಗೆ ಅಭ್ಯರ್ಥಿಯು ಎಲ್‍ಎಲ್‍ಬಿ ಪದವಿ ಮುಗಿಸಿರಬೇಕು.
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ-3.50ಲಕ್ಷಗಳಿಗೆ ಮೀರಿರಬಾರದು. ಅಭ್ಯರ್ಥಿಯ ವಯೋಮಿತಿಯು ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸದ ಕೊನೆಯ ದಿನಾಂಕಕ್ಕೆ 38 ವರ್ಷಗಳು ಮೀರಿರಬಾರದು. ಆಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ನೊಂದಾಯಿಸಿರಬೇಕು. ಅಭ್ಯರ್ಥಿಯು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ಸರ್ಕಾರಿ ವಕೀಲರು ಅಥವಾ
15 ವರ್ಷಗಳಿಗೆ ಕಡಿಮೆ ಇಲ್ಲದಂತೆ ಸೇವೆ ಸಲ್ಲಿಸಿರುವ ವಕೀಲರ ಬಳಿ ತರಬೇತಿ ಪಡೆಯುತ್ತಿರುವ ಬಗ್ಗೆ ಲಿಖಿತ ರೂಪದಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು. ಅಪೂರ್ಣ, ಅವಧಿ ಮೀರಿದ, ತಪ್ಪು ಮಾಹಿತಿ ಅಥವಾ ನಿಗದಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೆ ತಿರಸ್ಕರಿಸಲಾಗುವುದು. ತರಬೇತಿಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿಯೇ ಪಡೆಯಬೇಕು. ಉದ್ಯೋಗದಲ್ಲಿ ಇರುವ ನೌಕರರಿಗೆ ಅವಕಾಶ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ ದೂರವಾಣಿ ಸಂಖ್ಯೆ 08194-235134 ಸಂಪರ್ಕಿಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

