ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಾಂತಿಸಾಗರದಿಂದ ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಕೊಳವೆ ಮಾರ್ಗದ ದುರಸ್ಥಿ ಕಾರ್ಯದ ಹಿನ್ನಲೆಯಲ್ಲಿ ಸೆ.9 ರಂದು ನಗರದ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಕುಡಿಯುಲು ಕೊಳವೆ ಬಾವಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ನೀರನ್ನು ಉಪಯೋಗಿಸುವುದರೊಂದಿಗೆ ನೀರನ್ನು ಮಿತವಾಗಿ ಬಳಸುವಂತೆ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

